ಬಂಟ್ವಾಳ : ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನರಿಕೊಂಬು ಎಂಬಲ್ಲಿ ನಡೆದಿದೆ.
ಬಂಟ್ವಾಳ ನಿವಾಸಿ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್ (22) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕ.
ರಮೇಶ್ ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಆದರೆ ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ಈವರೆಗೆ ತಿಳಿದುಬಂದಿಲ್ಲ.
ಅತ್ಯಂತ ಸೌಮ್ಯ ಸ್ವಭಾವದ ಶ್ರಮ ಜೀವಿಯಾಗಿದ್ದ ರಮೇಶ್ ಇಲ್ಲಿನ ಸ್ಥಳೀಯ ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತನ ಅಣ್ಣ ಕೂಡ ಕಳೆದ ವರ್ಷ ಇವರ ಹಳೆಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಶೇಖರ ಪೂಜಾರಿ ಅವರಿಗೆ ಇಬ್ಬರು ಗಂಡು ಮಕ್ಕಳು, ಇದೀಗ ಇಬ್ಬರು ಕೂಡ ಆತ್ಮಹತ್ಯೆ ಮಾಡಿಕೊಂಡಂತಾಗಿದೆ. ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್ ಹಾಗೂ ಊರಿನ ಅನೇಕರು ಬೇಟಿ ನೀಡಿದ್ದಾರೆ. ಬಂಟ್ವಾಳ ನಗರ ಠಾಣಾ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…