ಬಂಟ್ವಾಳ: ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕರ ಸಹಿತ ಪ್ರಯಾಣಿಕರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿಸಿರೋಡಿನ ನೇತ್ರಾವತಿ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ.
ಇಲ್ಲಿನ ಬಿಸಿರೋಡಿನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜೀಪ ರೂಟ್ ನ ಶಾರದ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಘಟನೆಯಿಂದ ಬಸ್ ಚಾಲಕರು ಹಾಗೂ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 8 ಮಂದಿಗೆ ಸಣ್ಣಪುಟ್ಟ ಗಾಯವಾಗಿದೆ. ಇದೇ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಬಸ್ ಗೆ ಡಿಕ್ಕಿಯಾಗಿದ್ದು ಯಾವುದೇ ಅಪಾಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಲಭ್ಯವಾಗಿಲ್ಲ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾಗಿತ್ತು.
ಗಜಲಕ್ಷಿ ಕ್ರೇನ್ ಮೂಲಕ ಬಸ್ ಗಳನ್ನು ಸ್ಥಳದಿಂದ ಬದಿಗೆ ಸರಿಸಿದ ಬಳಿಕ ಸಂಚಾರಕ್ಕೆ ಅನುಕೂಲ ಮಾಡಿ ಕೊಡಲಾಯಿತು. ಮೆಲ್ಕಾರ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…