ಬಂಟ್ವಾಳ: ಖಾಸಗಿ ಬಸ್ ಪಲ್ಟಿ ; ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರ ಗಾಯ – vishwanews24

Featured, ದಕ್ಷಿಣ ಕನ್ನಡ

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ  ಬಸ್..

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಢಿಕ್ಕಿ..

10ಕ್ಕೂ ಅಧಿಕ ಪ್ರಯಾಣಿಕರು ಗಾಯ..

ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರಾಷ್ಟೀಯ ಹೆದ್ದಾರಿಯ ಫರಂಗಿಪೇಟೆ ಸಮೀಪ ಹತ್ತನೇ ಮೈಲ್ ಕಲ್ಲು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ವಿಭಜಕದ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಎರಡು ಮರಗಳಿಗೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಇದರಿಂದ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ವಿದ್ಯುತ್ ಶಾಕ್ : ಧರ್ಮಗುರು ನಿಧನ – vishwanews24

ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

Leave a Reply