ಬಂಟ್ವಾಳ : ಗದ್ದೆಯಲ್ಲಿ ನರ್ತೆ (ಚಿಪ್ಪು ಮೀನು) ಹೆಕ್ಕಲು ಹೋಗಿ ಕಾಲು ಜಾರಿ ಬಿದ್ದು ಕೆಸರಿನಲ್ಲಿ ಹೂತು ಯುವಕ  ಸಾವು 

Featured, ದಕ್ಷಿಣ ಕನ್ನಡ

ಬಂಟ್ವಾಳ : ಗದ್ದೆಯಲ್ಲಿ ನರ್ತೆ (ಚಿಪ್ಪು ಮೀನು) ಹೆಕ್ಕಲು ಹೋಗಿ ಕಾಲು ಜಾರಿ ಬಿದ್ದು ಕೆಸರಿನಲ್ಲಿ ಹೂತು ಯುವಕ  ಸಾವು 

ಬಂಟ್ವಾಳ: ಪೊಳಲಿ ಸಮೀಪದ ಕಲ್ಕುಟದ ಗದ್ದೆಯೊಂದರಲ್ಲಿ ನರ್ತೆ( ಶಂಕುಹುಳು) ಹೆಕ್ಕುವ ವೇಳೆ ಯುವಕನೋರ್ವ ನೀರು ಹಾಗೂ ಕೆಸರಿನಲ್ಲಿ ಹೂತು ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಕರಿಯಂಗಳ ಗ್ರಾಮದ ಸಾಣೂರುಪದವು ನಿವಾಸಿ ದಾಮೋದರ್(31) ಮೃತಪಟ್ಟ ಯುವಕ.

ಕರಾವಳಿಯ ಗದ್ದೆ, ಅಡುಗೆ ಮನೆಯಿಂದ ಮಾಯವಾಗಿವೆ ಶಂಕುಹುಳುಗಳು | Snails missing from fields and kitchens of Tulunadu - Kannada Oneindia

ದಾಮೋದರ್‌ ಗದ್ದೆಯ ಬದುವಿನಲ್ಲಿ ಕೂತು ನರ್ತೆ ಹೆಕ್ಕುತ್ತಿದ್ದ ವೇಳೆ ಆಯತಪ್ಪಿ ಗದ್ದೆಗೆ ಬಿದ್ದಿದ್ದಾರೆ. ಗದ್ದೆಯಲ್ಲಿ ನೀರಿನ ಜತೆಗೆ ಕೆಸರು ಕೂಡ ತುಂಬಿಕೊಂಡಿದ್ದು, ಈ ವೇಳೆ ಅವರ ಕುತ್ತಿಗೆವರೆಗೂ ಹೂತು ಹೋಗಿದ್ದಾರೆ. ಬಳಿಕ ಮೇಲಕ್ಕೆ ಬರಲು ಆಗದೆ ಮೃತಪಟ್ಟಿದ್ದಾರೆ.

ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದ ದಾಮೋದರ್ ಅವರು ತಂದೆ-ತಾಯಿ, ಪತ್ನಿ, ಸಣ್ಣ ಮಗು ಸೇರಿದಂತೆ ಕುಟುಂಬ ವರ್ಗವನ್ನು ಅಗಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಂಜಾಬ್ ಮಾದರಿಯಲ್ಲಿ ಕರ್ನಾಟಕದಲ್ಲೂ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ : ಭಾಸ್ಕರ ರಾವ್ – Vishwanews24

Leave a Reply