ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ – vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ

ಬಂಟ್ವಾಳ : ನಿಷೇಧಿತ ಎಂಡಿಎಂಎ, ಗಾಂಜಾ ಹೊಂದಿದ ಆರೋಪದಲ್ಲಿ ಬುಧವಾರ ಇಬ್ಬರನ್ನು ಬಂಧಿಸಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಒಟ್ಟು 4.90 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.

ಮಂಗಳೂರ ಅಡ್ಯಾರ್‌ನ ನಾಸಿರ್ ಹುಸೇನ್(37), ಕಂಕನಾಡಿಯ ಅಫ್ರಿದಿ(24) ಮತ್ತು ಬಂಟ್ವಾಳ ಗೋಳ್ತಮಜಲುವಿನ ಜುನೈದ್(38) ಬಂಧಿತ ಆರೋಪಿಗಳು.

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಇವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 225 ಲಕ್ಷ ರೂ. ಮೌಲ್ಯದ 22.57 ಗ್ರಾಂ ಎಂಡಿಎಂಎ ಹಾಗೂ 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು ಹಾಗೂ 5 ಮೊಬೈಲ್ ಗಳು ಸೇರಿದಂತೆ ಒಟ್ಟು 4.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ., ಬಂಟ್ವಾಳ ಗ್ರಾಮಾಂತರ ಠಾಣೆ ಪಿಎಸ್‌ಐ ರನ್ನಗೌಡ ಎಸ್.ಪಾಟೀಲ್, ಪ್ರೊಬೇಷನರಿ ಪಿಎಸ್‌ಐಗಳಾದ ಶಿವರಾಮ, ಫಕೀರಪ್ಪ, ಪೊಲೀಸ್ ಸಿಬ್ಬಂದಿಗಳಾದ ಉದಯ ರೈ, ರಾಧಾಕೃಷ್ಣ ಕೆ, ಪ್ರವೀಣ್ ರೈ, ಪ್ರಶಾಂತ್, ಲೋಕೇಶ್, ವಿವೇಕ ರೈ, ಕುಮಾರ್, ಬಸವರಾಜ್, ಶ್ರೀಧರ್, ಧನ್ಯಶ್ರೀ ಭಾಗವಹಿಸಿದ್ದರು. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಕಾರ್ಯಾಚರಣೆಗೆ ಸಹಕರಿಸಿದ್ದಾರೆ

Leave a Reply