ಬಂಟ್ವಾಳ : ನಿಷೇಧಿತ ಎಂಡಿಎಂಎ, ಗಾಂಜಾ ಹೊಂದಿದ ಆರೋಪದಲ್ಲಿ ಬುಧವಾರ ಇಬ್ಬರನ್ನು ಬಂಧಿಸಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಒಟ್ಟು 4.90 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.
ಮಂಗಳೂರ ಅಡ್ಯಾರ್‌ನ ನಾಸಿರ್ ಹುಸೇನ್(37), ಕಂಕನಾಡಿಯ ಅಫ್ರಿದಿ(24) ಮತ್ತು ಬಂಟ್ವಾಳ ಗೋಳ್ತಮಜಲುವಿನ ಜುನೈದ್(38) ಬಂಧಿತ ಆರೋಪಿಗಳು.
ಇವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 225 ಲಕ್ಷ ರೂ. ಮೌಲ್ಯದ 22.57 ಗ್ರಾಂ ಎಂಡಿಎಂಎ ಹಾಗೂ 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು ಹಾಗೂ 5 ಮೊಬೈಲ್ ಗಳು ಸೇರಿದಂತೆ ಒಟ್ಟು 4.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ., ಬಂಟ್ವಾಳ ಗ್ರಾಮಾಂತರ ಠಾಣೆ ಪಿಎಸ್‌ಐ ರನ್ನಗೌಡ ಎಸ್.ಪಾಟೀಲ್, ಪ್ರೊಬೇಷನರಿ ಪಿಎಸ್‌ಐಗಳಾದ ಶಿವರಾಮ, ಫಕೀರಪ್ಪ, ಪೊಲೀಸ್ ಸಿಬ್ಬಂದಿಗಳಾದ ಉದಯ ರೈ, ರಾಧಾಕೃಷ್ಣ ಕೆ, ಪ್ರವೀಣ್ ರೈ, ಪ್ರಶಾಂತ್, ಲೋಕೇಶ್, ವಿವೇಕ ರೈ, ಕುಮಾರ್, ಬಸವರಾಜ್, ಶ್ರೀಧರ್, ಧನ್ಯಶ್ರೀ ಭಾಗವಹಿಸಿದ್ದರು. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಕಾರ್ಯಾಚರಣೆಗೆ ಸಹಕರಿಸಿದ್ದಾರೆ
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…