ಬಂಟ್ವಾಳ: ಚಲಿಸುತ್ತಿದ್ದ ಬಸ್​ನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಸಾವು – Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ: ಚಲಿಸುತ್ತಿದ್ದ ಬಸ್​ನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಸಾವು 

ಬಂಟ್ವಾಳ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಸಾವನ್ನಪ್ಪಿದ ಘಟನೆ ಮಾಣಿ ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿಯ ನಿನ್ನಿಕಲ್ ನಿವಾಸಿ ರಾಧ(66) ಮೃತ ಮಹಿಳೆ. ಇವರು ಬಸ್‍ನಿಂದ ಹೊರಗೆಸೆಯಲ್ಪಟ್ಟ ದೃಶ್ಯ ಬಸ್ಸಿನಲ್ಲಿ ಅಳವಡಿಸಿದ್ದ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಹಿಂದುತ್ವದ ಪರವಾದ ಶಕ್ತಿ ಕಾಂಗ್ರೆಸ್ ಗೆ  ಖಂಡಿತ ಬುದ್ದಿ ಕಲಿಸುತ್ತದೆ , ಲೋಕಸಭಾ ಚುನಾವಣೆಯಲ್ಲಿ ಇದಕ್ಕೆ ಜನರೇ ಉತ್ತರ ನೀಡುತ್ತಾರೆ : ಬಿ.ವೈ.ರಾಘವೇಂದ್ರ – Vishwanews24

ಮಗುವನ್ನು ಹಿಡಿದುಕೊಂಡು ಮಹಿಳೆಯೊಬ್ಬರು ಬಸ್ ಹತ್ತಿದ್ದರು. ಹೀಗಾಗಿ ರಾಧಾ ಅವರು ಮಹಿಳೆಗೆ ಸೀಟು ಬಿಟ್ಟುಕೊಡಲು ಸೀಟಿನಿಂದ ಎದ್ದಿದ್ದಾರೆ. ಬಳಿಕ ಮುಂದಿನ ಬಾಗಿಲ ಬಳಿ ಬಸ್ಸಿನ ಸರಳು ಹಿಡಿದುಕೊಂಡು ನಿಂತಿದ್ದರು. ಈ ವೇಳೆ ಕೈ ಜಾರಿ ರಾಧಾ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ರಾಧಾ ಅವರನ್ನು ಆಸ್ಪತ್ರೆ ಸಾಗಿಸಿದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಬಸ್ ಚಾಲಕ, ನಿರ್ವಾಹಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿವೃತ್ತಿಗೆ ಎರಡು ತಿಂಗಳು ಬಾಕಿ ಇರುವಾಗಲೇ  ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ – Vishwanews24

Leave a Reply