ಬಂಟ್ವಾಳ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಸಾವನ್ನಪ್ಪಿದ ಘಟನೆ ಮಾಣಿ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿಯ ನಿನ್ನಿಕಲ್ ನಿವಾಸಿ ರಾಧ(66) ಮೃತ ಮಹಿಳೆ. ಇವರು ಬಸ್‍ನಿಂದ ಹೊರಗೆಸೆಯಲ್ಪಟ್ಟ ದೃಶ್ಯ ಬಸ್ಸಿನಲ್ಲಿ ಅಳವಡಿಸಿದ್ದ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮಗುವನ್ನು ಹಿಡಿದುಕೊಂಡು ಮಹಿಳೆಯೊಬ್ಬರು ಬಸ್ ಹತ್ತಿದ್ದರು. ಹೀಗಾಗಿ ರಾಧಾ ಅವರು ಮಹಿಳೆಗೆ ಸೀಟು ಬಿಟ್ಟುಕೊಡಲು ಸೀಟಿನಿಂದ ಎದ್ದಿದ್ದಾರೆ. ಬಳಿಕ ಮುಂದಿನ ಬಾಗಿಲ ಬಳಿ ಬಸ್ಸಿನ ಸರಳು ಹಿಡಿದುಕೊಂಡು ನಿಂತಿದ್ದರು. ಈ ವೇಳೆ ಕೈ ಜಾರಿ ರಾಧಾ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ರಾಧಾ ಅವರನ್ನು ಆಸ್ಪತ್ರೆ ಸಾಗಿಸಿದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಬಸ್ ಚಾಲಕ, ನಿರ್ವಾಹಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…