ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.
ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಮೃತಪಟ್ಟ ಮಹಿಳೆಯಾಗಿದ್ದು. ಚಾಲಕ ರೂಪೇಶ್ (40) ಅವರಿಗ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ ಸುಚಿತ್ರ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಇನ್ನು ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲೂಡಿ ಇಂಜಿನಿಯರ್ ಗೋಪಾಲ ಸಹೋದರಿ ಭಾಗೀರಥಿ ಅವರು ಅವರು ಮೃತಪಟ್ಟಿದ್ದಾರೆ. ಭಾಗೀರಥಿ ಅವರ ಮಗಳು ಸುಚಿತ್ರ ಅವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ ವಾಪಾಸ್ಸು ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು, ಜೀವಹಾನಿಗಳು ನಡೆದಿವೆ. ಇತ್ತೀಚೆಗೆ ಇದೊಂದು ಆ್ಯಕ್ಸಿಡೆಂಟ್ ಸ್ಪಾಟ್ ಆಗಿ ಪರಿವರ್ತನೆ ಆಗುತ್ತಿದೆ ಎಂದು ಸಾರ್ವಜನಿಕರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…