ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿರುವ ಹೊಟೇಲಿಗೆ ನುಗ್ಗಿ ಬಳಿಕ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ನಡೆದಿದೆ.
ಇಂಡಿಕಾ ಕಾರು ಮಂಗಳೂರಿನಿಂದ ಉಪ್ಪಿನಂಗಡಿ ಕಡೆ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಟೇಲ್ ಒಳಗೆ ನುಗ್ಗಿದ್ದು, ಹೊಟೇಲ್ ಮಾಲಕ ಗಂಭೀರ ಗಾಯಗೊಂಡಿದ್ದು, ಮೂವರು ಹೊಟೇಲ್ ಸಿಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡಿರುವ ಹೊಟೇಲ್ ಮಾಲಕರಾದ ರಿಯಾಝ್ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಇನ್ನು ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…