ಬಂಟ್ವಾಳ: ಉಳ್ಳಾಲ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಾಜಿ ಸಚಿವ, ವಿಪಕ್ಷ ನಾಯಕ ಯು.ಟಿ.ಖಾದರ್ ಅವರು ಕೇಂದ್ರದ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ನಾಯಕ್ ಬಿಲ್ಲವ ಮುಖಂಡ ಬಿ.ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ಇಂದು ಬೇಟಿ ನೀಡಿ ಪೂಜಾರಿ ಅವರ ಕಾಲಿಗೆ ನಮಸ್ಕರಿಸಿ ಮುಂದಿನ ಚುನಾವಣೆಯ ಗೆಲುವಿಗಾಗಿ ಆಶಿರ್ವಾದ ಪಡೆದರು.
ಕಾಂಗ್ರೇಸ್ ಕಾರ್ಯಕರ್ತರು ಕುಟುಂಬದ ಸದಸ್ಯರು ಅವರಿಗೆ ಕಿಂಚಿತ್ತೂ ನೋವಾಗದ ರೀತಿಯಲ್ಲಿ ಜೊತೆಯಲ್ಲಿ ಕರೆದುಕೊಂಡು ಹೋಗಿ ಅವರ ನೋವು ನಲಿವುಗಳಿಗೆ ಸದಾ ಜೊತೆ ನಿಂತು ಪ್ರೋತ್ಸಾಹ ನೀಡಿ ಎಂದು ಶಾಸಕರಿಗೆ ಪೂಜಾರಿ ಅವರು ಕಿವಿಮಾತು ಹೇಳಿದರು.
ಮುಂದಿನ ಚುನಾವಣೆಯಲ್ಲಿ ಪ್ರಚಂಡ ಬಹುಮತದ ಮೂಲಕ ಗೆಲುವು ಸಾಧಿಸಿ ಎಂದು ಹರಸಿದರು.
ಶಾಸಕ ಯು.ಟಿ.ಖಾದರ್ ಮಾತನಾಡಿ, ಚುನಾವಣೆಯ ಸ್ಪರ್ಧೆಯ ಮುನ್ನ ಹಿರಿಯ ಕಾಂಗ್ರೆಸ್ ನಾಯಕ ಕರಾವಳಿ ಭಾಗದ ಅಭಿವೃದ್ಧಿಗೆ ಕೊಡುಗೆ ನೀಡಿದ ಪೂಜಾರಿ ಅವರ ಮಾರ್ಗದರ್ಶನ ಸಲಹೆ ಸೂಚನೆ ಹಾಗೂ ಆಶ್ರೀರ್ವಾದ ಪಡೆಯಲು ಮನೆಗೆ ಬಂದಿದ್ದೇನೆ.
ನಾನು ವಿದ್ಯಾರ್ಥಿ ದೆಸೆಯಿಂದ ರಾಜಕೀಯವಾಗಿ ಬೆಳೆದು ಇಷ್ಟು ಎತ್ತರಕ್ಕೆ ಬೆಳೆಯಲು ಪೂಜಾರಿ ಅವರೇ ಕಾರಣ.ಕಳೆದ ಐದು ವರ್ಷಗಳಲ್ಲಿ ಕ್ಷೇತ್ರದ ಜನರ ಗೌರವಕ್ಕೆ ಚ್ಯುತಿ ಬರದ ರೀತಿಯ ಲ್ಲಿ ಕೆಲಸ ಮಾಡಿದ್ದೇನೆ,ಮುಂದೆಯೂ ಜನ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ಇದ್ದು, ಕ್ಷೇತ್ರದ ಜನರ ಜೊತೆ ಜಿಲ್ಲೆಯ ಜನರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತೇನೆ. ಸರ್ವ ಜನರ ಸರ್ವ ಧರ್ಮವನ್ನು ಪ್ರೀತಿ ಮಾಡಿಕೊಂಡು ಅಭಿವೃದ್ಧಿ ಕಾರ್ಯಮಾಡುತ್ತೇನೆ ಎಂದು ಅವರು ತಿಳಿಸಿದರು.
ಮುಡಿಪು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪ್ರಶಾಂತ್ ಕಾಜವ , ಪ್ರಮುಖರಾದ ಚಂದ್ರಹಾಸ ಕರ್ಕೇರ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಉಮ್ಮರ್ ಫಾರೂಕ್ ಪರಂಗಿಪೇಟೆ, ಪ್ರವೀಣ್ ಅಳ್ಚ, ದೇವದಾಸ ಭಂಡಾರಿ, ದೀಪಕ್ ಪಿಲಾರ್, ಮಹಮ್ಮದ್ ಮೋನು, ಕೃಷ್ಣ ಗಟ್ಟಿ,ಚಂದ್ರಿಕಾ, ರಮ್ಲಾನ್ ಮಾರಿಪಳ್ಳ,ಈಶ್ವರ್ ಉಳ್ಳಾಲ್, ಅಬ್ದುಲ್ ಜಲೀಲ್ , ನಾಸೀರ್ ನಡುಪದವು, ದೇವಣ್ಣ ಶೆಟ್ಟಿ, ದೇವದಾಸ್ ಭಂಡಾರಿ, ಸುರೇಶ್ ಭಟ್ ನಗರ, ಇಕ್ಬಾಲ್ ಸುಜೀರು, ಬಾಬು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…