Featured

ಬಂಟ್ವಾಳ:  ಜಾನುವಾರುಗಳ ಚರ್ಮಗಂಟು ರೋಗ – ಮೊದಲ ಬಾರಿಗೆ ಶಂಕಿತ ಪ್ರಕರಣ ಪತ್ತೆ ; 1 ದನ ಸಾವು – Vishwanews24

ಬಂಟ್ವಾಳ:  ಜಾನುವಾರುಗಳ ಚರ್ಮಗಂಟು ರೋಗ  – ಮೊದಲ ಬಾರಿಗೆ ಶಂಕಿತ ಪ್ರಕರಣ ಪತ್ತೆ ; 1 ದನ ಸಾವು

ಬಂಟ್ವಾಳ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿರುವ ಜಾನುವಾರುಗಳ ಚರ್ಮಗಂಟು ರೋಗ ಇದೇ ಮೊದಲ ಬಾರಿಗೆ ದ.ಕ.ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದು, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಒಂದೇ ಮನೆಯ ಮೂರು ದನಗಳಲ್ಲಿ ಶಂಕಿತ ಪ್ರಕರಣ ಪತ್ತೆಯಾಗಿದೆ.

ಅದರಲ್ಲಿ ಒಂದು ದನ ಈಗಾಗಲೇ ಮೃತಪಟ್ಟಿದ್ದು, ಎರಡು ದನಗಳು ಚಿಕಿತ್ಸೆಯ ಬಳಿಕ ಬಹುತೇಕ ಗುಣಮುಖವಾಗಿವೆ.

ದ.ಕ.ಜಿಲ್ಲಾ ಪಶು ಪಾಲನ ಇಲಾಖೆಯ ಮಾಹಿತಿ ಪ್ರಕಾರ ಬಿಳಿಯೂರಿನ ಮಲ್ಲಡ್ಕದಲ್ಲಿ ಕಾಣಿಸಿಕೊಂಡ ಶಂಕಿತ ಪ್ರಕರಣಕ್ಕೆ ಅ. 8ರಿಂದ ಕೆಎಂಎಫ್‌ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಒಂದು ದನ ಅ. 11ರಂದು ಮೃತಪಟ್ಟಿದೆ. ಆದರೆ ಉಳಿದ 2 ದನಗಳು ಬಹುತೇಕ ಗುಣಮುಖವಾಗಿವೆ. ದನ ಚರ್ಮಗಂಟು ರೋಗ ದಿಂದ ಸತ್ತಿಲ್ಲ, ಅದಕ್ಕೆ ಬೇರೆ ಕಾಯಿಲೆಯೂ ಇತ್ತು ಎನ್ನಲಾಗಿದೆ.

ಪಿಎಂ ಕಿಸಾನ್‌ ಸಮ್ಮಾನ್‌ – ಉಡುಪಿಯ 1.5 ಲಕ್ಷ ರೈತರಿಗೆ ಅನುದಾನ: ಶೋಭಾ ಕರಂದ್ಲಾಜೆ – Vishwanews24

ಈ ಖಾಯಿಲೆಯ ಮುಂಜಾಗ್ರತ ಕ್ರಮವಾಗಿ ಪ್ರಕರಣ ಕಂಡುಬಂದ ಮನೆಯ ಸುತ್ತಲೂ ಸೇರಿದಂತೆ ಗ್ರಾಮದ ಬಹುತೇಕ ಜಾನುವಾರುಗಳಿಗೆ ಎಲ್‌ಎಸ್‌ಡಿ ಲಸಿಕೆ ನೀಡಲಾಗಿದ್ದು, ಜತೆಗೆ ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್‌ ಕಾರ್ಯವನ್ನೂ ಮಾಡಲಾಗಿದೆ. ಜತೆಗೆ ಪ್ರದೇಶದ ಮನೆಗಳಿಗೆ ಮುಂಜಾಗ್ರತ ಕ್ರಮಗಳನ್ನೂ ತಿಳಿಸಲಾಗಿದೆ.

ಬಿಳಿಯೂರು ಪ್ರದೇಶದಲ್ಲಿ ಸುಮಾರು 600 ದನಗಳಿಗೆ ಲಸಿಕೆಗಳನ್ನು ನೀಡಲಾಗಿದ್ದು, ಉಳಿದಂತೆ ಜಿಲ್ಲೆಗೆ ಪೂರೈಕೆಯಾಗಿ ರುವ 2000 ಲಸಿಕೆಗಳಲ್ಲಿಗೋಶಾಲೆಗಳ ದನಗಳಿಗೆ ನೀಡುವ ಕಾರ್ಯಮಾಡಲಾಗಿದೆ. ಸತ್ತಿರುವ ದನದ ಕುರಿತು ಇಲಾಖೆಯು ಸರಕಾರಕ್ಕೆ ವರದಿ ನೀಡಿದ್ದು, 20 ಸಾವಿರ ರೂ. ಪರಿಹಾರ ಸಿಗುವ ಸಾಧ್ಯತೆ ಇದೆ.

ಮಂಗಳೂರು: ಮುಂದಿನ 15 ದಿನಗಳಲ್ಲಿ ಸುರತ್ಕಲ್ ಟೋಲ್ ಸಮಸ್ಯೆ ಪರಿಹಾರ : ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಎಂ.ಕೆ. ವತಾರೆ ಭರವಸೆ – Vishwanews24

ಬಿಳಿಯೂರಿನಲ್ಲಿ ಜಿಲ್ಲೆಯ ಮೊದಲ ಶಂಕಿತ ಪ್ರಕರಣ ಕಂಡುಬಂದಿದ್ದು, ಈಗಾಗಲೇ ಸುತ್ತಮುತ್ತಲ ಪ್ರದೇಶದಲ್ಲಿ ಲಸಿಕೆ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಕಾರ್ಯವನ್ನು ನಡೆಸಿದ್ದೇವೆ. ಜಿಲ್ಲೆಗೆ ಬಂದಿರುವ 2 ಸಾವಿರ ಲಸಿಕೆಗಳನ್ನು ಈಗಾಗಲೇ ನೀಡಲಾಗಿದ್ದು, ಹೆಚ್ಚಿನ ಲಸಿಕೆಗಳಿಗೆ ಬೇಡಿಕೆ ಸಲ್ಲಿಸಲಾಗಿದೆ. ಜತೆಗೆ ಸತ್ತಿರುವ ದನಕ್ಕೆ ಸರಕಾರದಿಂದ ಸಿಗುವ ಪರಿಹಾರಕ್ಕೂ ವ್ಯವಸ್ಥೆ ಮಾಡಲಾಗುತ್ತಿದೆ.– ಅರುಣ್‌ಕುಮಾರ್‌ ಶೆಟ್ಟಿ ಉಪನಿರ್ದೇಶಕರು, ಪಶು ಪಾಲನಾ ಇಲಾಖೆ. ದ.ಕ.ಜಿಲ್ಲೆ

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago