Featured

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಪುಟ್ಟ ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಸಾವು – Vishwanews24

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಪುಟ್ಟ ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.‌

ಇಲ್ಲಿನ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ.

ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು.‌ಆದರೆ ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಿಸಿದ್ದು,ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾಳೆ.

ಆರಾಧ್ಯ ಆಚಾರ್ಯ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದು, ಬಾಲಕಿಯ ಸಾವಿಗೆ ಶಾಲೆಯ ಆಡಳಿತಮಂಡಳಿ, ಶಿಕ್ಷಕ ವೃಂದ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಗೌರವಾರ್ಥ ಶಾಲೆಗೆ ಗುರುವಾರ ರಜೆ ಸಾರಲಾಗಿತ್ತು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

18 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

18 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

18 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

21 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

22 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

22 hours ago