ಬಂಟ್ವಾಳ: ಟ್ಯಾಂಕರ್ – ಕಾರು ನಡುವೆ ಭೀಕರ ರಸ್ತೆ ಅಪಘಾತ -Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ: : ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಹಾಗು ಟೂರಿಸ್ಟ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾ.ಹೆದ್ದಾರಿಯ ಬ್ರಹ್ಮರಕೂಟ್ಲು ಟೋಲ್ ಸಮೀಪ ಇದೀಗ ಸಂಭವಿದೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ಬರುತ್ತಿದ್ದ ಟ್ಯಾಂಕರ್  ನಡುವೆ ಈ ಅಪಘಾತ ಸಂಭವಿಸಿದೆ.

ಟ್ಯಾಂಕರ್ ಢಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮೃತರೆಲ್ಲರು ಭಟ್ಕಳ ಮೂಲದವರೆಂದು ತಿಳಿದು ಬಂದಿದ್ದು, ಕಾರು ಚಾಲಕನ ನಿರ್ಲಕ್ಷ್ಯದ  ಚಾಲನೆಯೇ ಅಪಘಾತಕ್ಕೆ ಕಾರಣವೆಂದು ತಿಳಿದು ಬಂದಿದೆ.

ಭೀಕರ ಅಪಘಾತದಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.