Featured

ಬಂಟ್ವಾಳ : ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಪಲ್ಟಿ – ಓರ್ವ ಸಾವು… Vishwanews24

ಬಂಟ್ವಾಳ : ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಪಲ್ಟಿ – ಓರ್ವ ಸಾವು…

ಬಂಟ್ವಾಳ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ.

ಮೃತರನ್ನು ನಂದರಬೆಟ್ಟು ನಿವಾಸಿ 77 ವರ್ಷದ ಸದಾಶಿವ ಆಚಾರ್ಯ ಎಂದು ಗುರುತಿಸಲಾಗಿದೆ. ಸದಾಶಿವ ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಪುತ್ತೂರಿನಿಂದ ದೇವರ ಕಾರ್ಯದಲ್ಲಿ ಭಾಗಿಯಾಗಿ ವಾಪಾಸು ಮನೆಗೆ ಬರುವ ವೇಳೆ ಬಿಸಿರೋಡಿನ ಅಜ್ಜಿಬೆಟ್ಟು ಕ್ರಾಸ್ ಸಮೀಪದಲ್ಲಿ ಈ ಅವಘಡ ಸಂಭವಿಸಿದೆ.

ಚಾಲಕನ ಅಜಾಗರೂಕತೆಯಿಂದ ಡಿವೈಡರ್ ಗೆ ಗುದ್ದಿದ ಕಾರು ಅ ಬಳಿಕ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕ ಸೇರಿ ನಾಲ್ಕು ಜನ ಒಂದೇ ಮನೆಯವರು ಪ್ರಯಾಣಿಸುತ್ತಿದ್ದರು. ಪುತ್ತೂರು ಸಂಬಂಧಿಕರ ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮನೆಗೆ ಇನ್ನೇನು ಕೇವಲ 5 ನಿಮಿಷಗಳ ಕಾಲದಲ್ಲಿ ಮುಟ್ಟುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ತಲೆಗೆ ಗಾಯವಾಗಿದ್ದ ಸದಾಶಿವ ಅವರನ್ನು ಕೈಕಂಬ ಪರ್ಲಿಯಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

11 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

19 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

19 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

19 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

19 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

19 hours ago