ಬಂಟ್ವಾಳ: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ – Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ – Vishwanews24

ಬಂಟ್ವಾಳ: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದ ಮನೆಯಲ್ಲಿ ಸೋಮವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ಎಂಬವರ ಪುತ್ರಿ ನಿಶ್ಮಿತಾ (22) ಎಂದು ಗುರುತಿಸಲಾಗಿದೆ.

ನಿಶ್ಮಿತಾ ಡೆಂಟಲ್ ಕ್ಲಿನಿಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಅ.11ರಂದು ಮುಂಜಾನೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡೆತ್ ನೋಟ್ ಮತ್ತು ಮೊಬೈಲ್ ಕೂಡ ಮೃತದೇಹ ದೊರೆತ ಸ್ಥಳದಲ್ಲಿ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖವಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ : ಈ ಬಾರಿಯೂ ಬಾಲಕಿಯರೇ ಮೇಲುಗೈ – Viashwanews24