ಬಂಟ್ವಾಳ :ಲಾರಿ ಚಾಲನೆಯಲ್ಲಿರುವಾಗಲೇ ಚಾಲನೋರ್ವನಿಗೆ ಮೂರ್ಚೆ ರೋಗ ಬಾಧಿಸಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಬಂಕ್ ಗೆ ನುಗ್ಗಿ ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಬಿಸಿರೋಡ್ ನಲ್ಲಿ ನಡೆದಿದೆ.
ಲಾರಿ ಮಂಗಳೂರು ಕಡೆಯಿಂದ ಹಾಸನಕ್ಕೆ ಹೋಗುತ್ತಿದ್ದ ವೇಳೆ ಬಿಸಿರೋಡ್ ನ ಪೆಟ್ರೋಲ್ ಪಂಪ್ ಬಳಿ ಈ ಅವಘಡ ಸಂಭವಿಸಿದೆ. ಚಾಲಕನಿಗೆ ಮೂರ್ಚೆ ರೋಗ ಬಾಧಿಸಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಚಾಲಕನನ್ನು ಲಕ್ಷಣ್ ಎಂದು ಗುರುತಿಸಲಾಗಿದೆ.
ಈತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್ ಹಾಕುತ್ತಿದ್ದ ರಿಟ್ಸ್ ಕಾರಿಗೆ ಡಿಕ್ಕಿ ಹೊಡೆದ ಲಾರಿ ಬಳಿಕ ಬೈಕ್ ಹೀಗೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಬಳಿಕ ಲಾರಿ ಪೆಟ್ರೋಲ್ ಪಂಪ್ ನಲ್ಲಿ ನಿಲ್ಲಿಸಲಾಗಿದ್ದ ನ್ಯಾನೋ ಕಾರಿಗೆ ಡಿಕ್ಕಿ ಹೊಡೆದು ನಿಂತಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…