ಬಂಟ್ವಾಳ: ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.
ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರು ದಾಳಿ ನಡೆಸಿದ ಆರೋಪಿಗಳಾಗಿದ್ದಾರೆ.
ಅಮ್ಮೆಮಾರ್ ನಿವಾಸಿ ತಸ್ಲೀಮ್, ಮಹಮ್ಮದ್ ಶಾಕೀರ್, ನಾಸೀರ್, ಸಿಯಾಬು, ಸೈಫುದ್ದೀನ್ ಅವರು ಮಾತನಾಡುತ್ತಿದ್ದ ವೇಳೆ ತಸ್ಲೀಮ್ ಗೆ ಕರೆಯೊಂದು ಬಂದಿದ್ದು, ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದು ನಾಲ್ಕು ಮಾರ್ಗಕ್ಕೆ ಬರುವಂತೆ ಸವಾಲು ಹಾಕಿದ್ದಾನೆ. ಈ ವೇಳೆ ಅವರು ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ, ಆರೋಪಿ ಮನ್ಸೂರ್ ಹಾಗೂ ಇತರರು ಇದ್ದು, ಈ ವೇಳೆ ಪಲ್ಟಿ ಇಮ್ರಾನ್ ತಲವಾರಿನಿಂದ ತಸ್ಲೀಮ್ ನ ಬಲಕಾಲು, ಮತ್ತೋರ್ವ ಆರೋಪಿ ಮುಸ್ತಾಕ ನು ಬಲಗೈಗೆ ಕಡಿದಿದ್ದು, ಸರ್ಫುದ್ದೀನ್ ಕಲ್ಲಿನಿಂದ ಹೊಡೆದಿರುತ್ತಾನೆ.
ಈ ವೇಳೆ ತಸ್ಲೀಮ್ ನೆಲಕ್ಕೆ ಬಿದ್ದಾಗ, ಮನ್ಸೂರ್ ಮುಖಕ್ಕೆ ಕಡಿದಿರುತ್ತಾನೆ. ಜೊತೆಗೆ ಆರೋಪಿಗಳು ಮಹಮ್ಮದ್ ಶಾಕೀರ್ ಗೂ ಅದೇ ರೀತಿ ತಲವಾರಿನಿಂದ ಕಡಿದಿರುತ್ತಾರೆ. ಜೊತೆಗೆ ಆಶ್ರಫ್, ರಿಜ್ವಾನ್ ಮತ್ತು ಲತೀಫ್ ಮರದ ದೊಣ್ಣೆಯಿಂದ ಹೊಡೆದಿರುತ್ತಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತಸ್ಲೀಮ್ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭದ್ರತಾ ಪಡೆಗಳ ಎನ್ಕೌಂಟ್ಗೆ ಲಷ್ಕರ್ ಉಗ್ರ ಲತೀಫ್ ಭಟ್ ಬಲಿ ಶ್ರೀನಗರ: ಕುಲ್ಗಾಮ್ನ ಸಿಆರ್ಪಿಎಫ್ ಚೆಕ್ ಪೋಸ್ಟ್ ಮೇಲೆ ದಾಳಿ…
ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಮುಷ್ಕರ ಬೆಂಗಳೂರು: ಮಾಸಿಕ…
ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ ಸೋನಿಯಾ ಗಾಂಧಿ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ 5ನೇ…
ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ ; ಚಾಲಕ ಅಪಾಯದಿಂದ ಪಾರು ಬ್ರಹ್ಮಾವರ,:ಒಣ ಹುಲ್ಲು…
ಮಂಗಳೂರು: ಮೊಟ್ಟೆ ಸಾಗಣೆ ವಾಹನದಲ್ಲಿ ಅಕ್ರಮ ಜಾನುವಾರು ಸಾಗಟ ; ಇಬ್ಬರು ಬಂಧನ ಮಂಗಳೂರು: ನಗರದ ಪಂಪ್ವೆಲ್ ಬಳಿ ಮೊಟ್ಟೆ…
ಚಿಕಿತ್ಸೆಗೂ ಮುನ್ನವೇ ವೆಚ್ಚದ ಮಾಹಿತಿ ಕಡ್ಡಾಯ :ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ…