ಬಂಟ್ವಾಳ: ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.
ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರು ದಾಳಿ ನಡೆಸಿದ ಆರೋಪಿಗಳಾಗಿದ್ದಾರೆ.
ಅಮ್ಮೆಮಾರ್ ನಿವಾಸಿ ತಸ್ಲೀಮ್, ಮಹಮ್ಮದ್ ಶಾಕೀರ್, ನಾಸೀರ್, ಸಿಯಾಬು, ಸೈಫುದ್ದೀನ್ ಅವರು ಮಾತನಾಡುತ್ತಿದ್ದ ವೇಳೆ ತಸ್ಲೀಮ್ ಗೆ ಕರೆಯೊಂದು ಬಂದಿದ್ದು, ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದು ನಾಲ್ಕು ಮಾರ್ಗಕ್ಕೆ ಬರುವಂತೆ ಸವಾಲು ಹಾಕಿದ್ದಾನೆ. ಈ ವೇಳೆ ಅವರು ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ, ಆರೋಪಿ ಮನ್ಸೂರ್ ಹಾಗೂ ಇತರರು ಇದ್ದು, ಈ ವೇಳೆ ಪಲ್ಟಿ ಇಮ್ರಾನ್ ತಲವಾರಿನಿಂದ ತಸ್ಲೀಮ್ ನ ಬಲಕಾಲು, ಮತ್ತೋರ್ವ ಆರೋಪಿ ಮುಸ್ತಾಕ ನು ಬಲಗೈಗೆ ಕಡಿದಿದ್ದು, ಸರ್ಫುದ್ದೀನ್ ಕಲ್ಲಿನಿಂದ ಹೊಡೆದಿರುತ್ತಾನೆ.
ಈ ವೇಳೆ ತಸ್ಲೀಮ್ ನೆಲಕ್ಕೆ ಬಿದ್ದಾಗ, ಮನ್ಸೂರ್ ಮುಖಕ್ಕೆ ಕಡಿದಿರುತ್ತಾನೆ. ಜೊತೆಗೆ ಆರೋಪಿಗಳು ಮಹಮ್ಮದ್ ಶಾಕೀರ್ ಗೂ ಅದೇ ರೀತಿ ತಲವಾರಿನಿಂದ ಕಡಿದಿರುತ್ತಾರೆ. ಜೊತೆಗೆ ಆಶ್ರಫ್, ರಿಜ್ವಾನ್ ಮತ್ತು ಲತೀಫ್ ಮರದ ದೊಣ್ಣೆಯಿಂದ ಹೊಡೆದಿರುತ್ತಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತಸ್ಲೀಮ್ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…