ಬಂಟ್ವಾಳ: ತಾಲೂಕಿನ ವಿಟ್ಲ ಸಮೀಪದ ಮಿತ್ತೂರಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತನ್ನ ಜಮೀನಿನಲ್ಲಿ ಬೆಳೆದ ಅಡಕೆ ಮಾರಾಟದಿಂದ ಬಂದ ಆದಾಯದಿಂದ ಶಾಲಾ ಬಸ್ ಖರೀದಿಸಿದೆ.
112 ವರ್ಷಗಳ ಇತಿಹಾಸ ಹೊಂದಿರುವ ಈ ಶಾಲೆಗೆ ನಾಲ್ಕು ಎಕರೆ ಜಮೀನಿದೆ. 2017ರಲ್ಲಿ ಎಸ್ ಡಿಎಂಸಿ, ಶಿಕ್ಷಕರು ಹಾಗೂ ಗ್ರಾಮಸ್ಥರು ಸೇರಿ 628 ಅಡಿಕೆ ಸಸಿಗಳನ್ನು ನೆಟ್ಟಿದ್ದರು. ಈಗ ಇಳುವರಿ ಪಡೆಯುತ್ತಿದ್ದಾರೆ. ಶಾಲೆಯ ಹೊಲವನ್ನು ಹೊರಗುತ್ತಿಗೆ ನೀಡಲಾಗಿದೆ. ಶಾಲೆಗೆ ವಾರ್ಷಿಕ 2.50 ಲಕ್ಷ ಆದಾಯ ಬರುತ್ತದೆ.
ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ಶಾಲೆಗೆ 26 ಆಸನಗಳ ಬಸ್ ಖರೀದಿಸಲಾಗಿದೆ. ಬಸ್‌ನ ನಿರ್ವಹಣೆಯನ್ನು ಅಡಿಕೆ ತೋಟದ ಆದಾಯದಿಂದಲೇ ಎಸ್‌ಡಿಎಂಸಿ ನಿರ್ವಹಿಸುತ್ತದೆ.
ಶಾಸಕ ಸಂಜೀವ ಮಠಂದೂರು ಇತ್ತೀಚೆಗೆ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಗ್ರಾಮಸ್ಥರು, ಶಾಲಾ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಿರ್ವ: ಮೆಸ್ಕಾಂ ವಾಹನದಿಂದ ಕಾರಿನ ಮೇಲೆ ಬಿದ್ದ ವಿದ್ಯುತ್ ಕಂಬ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…