ಬಂಟ್ವಾಳ: ತಾಯಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ತಾಲೂಕಿನ ಬರಿಮಾರು ಗ್ರಾಮದ ಗಾಣದಪಾಲು ಎಂಬಲ್ಲಿಂದ ವರದಿಯಾಗಿದೆ.
ಗಾಣದಪಾಲು ನಿವಾಸಿ ಪದ್ಮನಾಭ ಪೂಜಾರಿ ಅವರ ಧರ್ಮ ಪತ್ನಿ ದೀಕ್ಷಿತಾ ಅವರು ಮೂರು ಮಕ್ಕಳಿಗೆ ಅ.19 ರಂದು ಮಧ್ಯಾಹ್ನ 12.45 ರ ವೇಳೆ ಜನ್ಮ ನೀಡಿದ್ದಾರೆ. ಪ್ರಸ್ತುತ ತಾಯಿ ಮತ್ತು ಮೂರು ಮಕ್ಕಳು ಆರೋಗ್ಯದಿಂದ್ದಾರೆ. ಮೊದಲು ಗಂಡು ಮಗುವಿಗೆ ಜನ್ಮ ನೀಡಿದ ಆಕೆ ಬಳಿಕ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾಳೆ.
ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ಡಾ. ವಿನೀತ ಶೆಟ್ಟಿ ಅವರ ತಂಡ ಸಿಸೇರಿಯನ್ ಮೂಲಕ ಮಕ್ಕಳನ್ನು ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಮೂವರು ಮಕ್ಕಳ ತೂಕ ಕಡಿಮೆ ಇರುವುದರಿಂದ ಮಕ್ಕಳನ್ನು ಐಸಿಯು ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ಸ್ಟಾಗ್ರಾಂ ಪರಿಚಯ : ಯುವಕನ ಹುಡುಕಿಕೊಂಡು ಚೆನ್ನೈ ನಿಂದ ಸುರತ್ಕಲ್ ಗೆ ಬಂದ ಎಂಬಿಬಿಎಸ್ ವಿಧ್ಯಾರ್ಥಿನಿ..
ಕಳೆದ ಸುಮಾರು ಒಂದುವರೆ ತಿಂಗಳಿನಿಂದ ದೀಕ್ಷಿತಾ ಅವರನ್ನು ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ದಾಖಲು ಮಾಡಿ ವಿಶೇಷ ಕಾಳಜಿಯಿಂದ ವೈದ್ಯಕೀಯ ಚಿಕಿತ್ಸೆ ನೀಡಿ ನೋಡಿಕೊಂಡ ಸರಕಾರಿ ಆಸ್ಪತ್ರೆಯ ವೈದ್ಯರ ತಂಡಕ್ಕೆ ಮನೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.
ಬಡತನದಲ್ಲಿ ಜೀವನ ಸಾಗಿಸುವ, ಕೂಲಿ ಕಾರ್ಮಿಕ ಪದ್ಮನಾಭ ಪೂಜಾರಿ ಅವರ ಪತ್ನಿ ದೀಕ್ಷಿತಾ ಮೂರು ಮಕ್ಕಳಿಗೆ ಜನ್ಮ ನೀಡಿದಾಗ ಮನೆಯಲ್ಲಿ ಸಂತಸ ಮೂಡಿದೆ, ಆದರೆ ಇನ್ನೊಂದು ಕಡೆ ಅವರ ಪೋಷಣೆಯ ಜವಾಬ್ದಾರಿ ಇವರ ಮೇಲೆ ಸವಾಲು ಆಗಬಹುದು. ಮಂಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ತಿಳಿಸಿದಂತೆ ಹೆರಿಗೆಗಾಗಿ ಒಂದುವರೆ ತಿಂಗಳ ಮೊದಲೇ ದಾಖಲಾಗಿದ್ದರು. ತೂಕ ಕಡಿಮೆ ಇರುವ ಕಾರಣಕ್ಕಾಗಿ ಇದೀಗ ಮೂರು ಮಕ್ಕಳನ್ನು ಐಸಿಯು ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…