Featured

ಬಂಟ್ವಾಳ: ದರೋಡೆ ನಡೆದ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ , ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ – vishwanews24

ಬಂಟ್ವಾಳ: ಈಡಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ ನಡೆದ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ

ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

ವಿಟ್ಲ: ಈಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಸಮಾಲೋಚನೆ ನಡೆಸಿದರು.

ಈ ವೇಳೆ ಮಾತನಾಡಿದ ಯು.ಟಿ.ಖಾದರ್, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ವಿವರ ನೀಡಿದರು.

ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲೀಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು. ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಘಟನೆ ಹಿನ್ನೆಲೆ: ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿನ ನಿವಾಸಿ ಸುಲೈಮಾನ್ ಹಾಜಿ ಎಂಬವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ಕಳೆದ ಶುಕ್ರವಾರ ರಾತ್ರಿ ಅವರ ಮನೆಗೆ ತಮಿಳುನಾಡು ರಿಜಿಸ್ಟ್ರೇಶನ್ ಹೊಂದಿರುವ ಮಾರುತಿ ಎರ್ಟಿಗಾ ಕಾರಿನಲ್ಲಿ ಆಗಮಿಸಿದ ದೃಢಕಾಯ ಶರೀರದ 6 ಮಂದಿಯ ತಂಡವೊಂದು ದಾಳಿ ನಡೆಸಿದಂತೆ ನಟಿಸಿದೆ.

ನಾವು ಈಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಎಂದು ನಂಬಿಸಿ ಸುಮಾರು ಎರಡೂವರೆ ಗಂಟೆಗಳ ವರೆಗೆ ತನಿಖೆ ನಡೆಸಿದ ನಾಟಕ ಮಾಡಿ ಮನೆಯಲ್ಲಿ ಸಿಕ್ಕಿದ ದೊಡ್ಡ ಸಂಖ್ಯೆಯ ಮೊತ್ತವನ್ನು ದೋಚಿ ಪರಾರಿಯಾಗಿದ್ದಾರೆ. ದರೋಡೆಕೋರರು ವಶಪಡಿಸಿದ್ದ ಮನೆಯವರ ಮೊಬೈಲ್ ಫೋನ್ ಗಳು ಮನೆಯ ತಳಹಂತಸ್ತಿನ ರ‍್ಯಾಕ್ ನಲ್ಲಿ ಮಂಗಳವಾರ ಪತ್ತೆಯಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago