ಬಂಟ್ವಾಳ : ದ್ವಿಚಕ್ರ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನ ಎಲ್‌ಐಸಿ ಕಚೇರಿ ಮುಂಭಾಗ ನಡೆದಿದೆ.
ಉಪ್ಪಿನಂಗಡಿ ಸಮೀಪದ ನಟ್ಟಿಬೈಲು ಎಂಬಲ್ಲಿನ ನಿವಾಸಿ ಕೆ.ಸದಾರಾಮ ಅವರ ಪತ್ನಿ ಸರಸ್ವತಿ (50) ಮೃತ ಮಹಿಳೆ. ಮೃತರ ಪತಿ ಎಲ್‌ಐಸಿ ಏಜೆಂಟ್ ಆಗಿದ್ದು, ಕಚೇರಿಯಲ್ಲಿ ಕಾರ್ಯಕ್ರಮ ಇದ್ದ ಕಾರಣ ಸರಸ್ವತಿ ಅವರು ಬಂದಿದ್ದರು. ಎಲ್‌ಐಸಿ ಕಚೇರಿಯಿಂದ ಮರಳುತ್ತಿರುವಾಗ, ಉಪ್ಪಿನಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ತಲೆಯ ಭಾಗಕ್ಕೆ ಗಾಯಗಳಾಗಿದ್ದ ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಮೃತರು ಪತಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…