ಬಂಟ್ವಾಳ: ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕ ಗಿರೀಶ್ (37) ಅವರ ಮೃತದೇಹ ಶುಕ್ರವಾರ ಸಂಜೆ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ.
ಗಿರೀಶ್ ಗುರುವಾರ ಮುಂಜಾನೆ ಬಾಡಿಗೆ ಹೋಗಲು ಇದೆ ಎಂದು ಹೇಳಿ ಮನೆಯಿಂದ ತೆರಳಿದ್ದು, ಈ ವೇಳೆ ಗಸ್ತುನಲ್ಲಿದ್ದ ಪೊಲೀಸರು ಪೊಳಲಿ ಸೇತುವೆ ಮೇಲೆ ರಿಕ್ಷಾ ಒಂದು ಅಡ್ಡವಾಗಿ ನಿಂತಿದ್ದನ್ನು ಗಮನಿಸಿದ್ದಾರೆ. ಬಳಿಕ ಪರಿಶೀಲನೆ ನಡೆಸಿದ ಪೊಲೀಸರು ರಿಕ್ಷಾದಲ್ಲಿ ಯಾರೂ ಇಲ್ಲದೇ ಇರುವುದರಿಂದ ಗಿರೀಶನ ಮನೆಗೆ ಮಾಹಿತಿ ತಿಳಿಸಿದ್ದಾರೆ. ಇನ್ನು ಗಿರೀಶ್ ಅಡ್ಡೂರು-ಪೊಳಲಿ ಸೇತುವೆಯ ಮೇಲೆ ವಾಹನ ನಿಲ್ಲಿಸಿ ಫಲ್ಗುಣಿ ನದಿಗೆ ಹಾರಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಗಿರೀಶ್ ಅವರ ಮೃತದೇಹವು ಅಡ್ಡೂರಿನ ಕೆಳಗಿನಕೆರೆಯಲ್ಲಿ ಪತ್ತೆಯಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಗಿರೀಶ್ ಅವರ ಆತ್ಮಹತ್ಯೆಗೆ ಕಾರಣ ಇನ್ನು ತಿಳಿದುಬಂದಿಲ್ಲ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…