ಬಂಟ್ವಾಳ: ಫರಂಗಿಪೇಟೆಯಲ್ಲಿ ನಾಪತ್ತೆಯಾಗಿರುವ ಪಿಯು ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ವಿಚಾರ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಪ್ರಸ್ತಾಪವಾಯಿತು.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್, ತನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಫೆ.25ರಿಂದ ನಾಪತ್ತೆಯಾಗಿರುವ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ತನಿಖೆ ಏನಾಯಿತು? ಆತನ ಪತ್ತೆಗೆ ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ? ಎಂದು ಪ್ರಶ್ನಿಸಿದರು.
ದಿಗಂತ್ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಸರಕಾರಕ್ಕೆ ಸೂಚಿಸಿದರು. ಈ ವೇಳೆ ರಾಜ್ಯ ಗೃಹಸಚಿವರ ಅನುಪಸ್ಥಿತಿಯಲ್ಲಿ ಪ್ರತಿಕ್ರಿಯೆ ನೀಡಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, 17 ವರ್ಷದ ದ್ವಿತೀಯ ಪಿಯು ವಿದ್ಯಾರ್ಥಿ ದಿಗಂತ್ ಫೆ.25ರಂದು ರಾತ್ರಿ 7:30ರ ಸುಮಾರಿಗೆ ದೇವಸ್ಥಾನಕ್ಕೆಂದು ಮನೆಯಿಂದ ಹೋದವ ಬಳಿಕ ನಾಪತ್ತೆಯಾಗಿದ್ದಾನೆ. ಆತನ ಮೊಬೈಲ್ ಫೋನ್ ಮತ್ತು ಚಪ್ಪಲಿ ಮನೆಯಿಂದ 200 ಮೀಟರ್ ದೂರದಲ್ಲಿ ಪತ್ತೆಯಾಗಿದೆ.
ಬಾಲಕನ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು. ದಿಗಂತ್ ಮೊಬೈಲ್ ಫೋನ್ ಟ್ರೇಸ್ ಮಾಡಲಾಗುತ್ತಿದೆ. ಸದ್ಯ ಯಾವುದೇ ಮಾಹಿತಿ ಸಿಕ್ಕಿಲ್ಲ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಶೀಘ್ರವಾಗಿ ಪತ್ತೆ ಹಚ್ಚಲಾಗುವುದು. ವಿದ್ಯಾರ್ಥಿಗಳ ಪೋಷಕರು ಆತಂಕ ಪಡುವ ಅಗತ್ಯ ಇಲ್ಲ ಎಂದರು. ಎಲ್ಲಾ ಆಯಾಮಗಳಲ್ಲಿ ತನಿಖೆಯನ್ನು ಕೇಂದ್ರೀಕರಿಸಿ ತನಿಖೆ ನಡೆಸುವಂತೆ ಸ್ಪೀಕರ್ ಸೂಚಿಸಿದರು.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…