Featured

ಬಂಟ್ವಾಳ : ನಾಲ್ವರು ಮುಸುಕುದಾರಿಗಳಿಂದ ಬೆಳ್ಳಂಬೆಳಗ್ಗೆ ದರೋಡೆ – ತಾಯಿಮಗಳಿಗೆ ಹಲ್ಲೆ ನಡೆಸಿ ಲಕ್ಷಾಂತರ ರೂ. ನಗ ನಗದು ಲೂಟಿ..vishwanews24

ಬಂಟ್ವಾಳ : ನಾಲ್ವರು ಮುಸುಕುದಾರಿಗಳಿಂದ ಬೆಳ್ಳಂಬೆಳಗ್ಗೆ ದರೋಡೆ – ತಾಯಿಮಗಳಿಗೆ ಹಲ್ಲೆ ನಡೆಸಿ ಲಕ್ಷಾಂತರ ರೂ. ನಗ ನಗದು ಲೂಟಿ..

ಬಂಟ್ವಾಳ: ನಾಲ್ವರು ಮುಸುಕುದಾರಿ ದರೋಡೆ ಕೋರರ ತಂಡ ಮನೆಯೊಂದರಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದರೋಡೆ ಮಾಡಿದ ಘಟನೆ ಇಂದು ಗುರುವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಗ್ಗದಲ್ಲಿ ನಡೆದಿದೆ.

ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿ ರುವ ಪ್ಲೋರಿನ್ ಪಿಂಟೋ ಅವರ ಹೊಸ ಮನೆಯಲ್ಲಿ ಈ ದರೋಡೆ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದು ಗಂಡಸರಿಲ್ಲದ ಮನೆಯನ್ನು ಹೊಂಚುಹಾಕಿ ಈ ದರೋಡೆ ನಡೆಸಲಾಗಿದೆ.

ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂಮೌಲ್ಯದ ವಿವಿಧ ಬಂಗಾರಗಳು, 30 ಸಾವಿರನಗದು ಹಾಗೂ ಒಂದು ಮೊಬೈಲ್ ಪೋನ್ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗನಗದು ದೋಚಿದ್ದಾರೆ. ಇಂದು ಬೆಳಿಗ್ಗೆ ಸುಮಾರು 6.30 ರ ಸಮಯದಲ್ಲಿ ಬೆಲ್ ಹಾಕಿದಾಗ ಬಾಗಿಲು ತೆಗದು ನೋಡಿದಾಗ ನಾಲ್ವರು ಮುಸುಕುದಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ನಗನಗದು ಕೊಡುವಂತೆ ಬೆದರಿಸಿದ್ದಾರೆ.

ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದಾಗ ಗೊದ್ರೇಜ್ ನ ಬೀಗದ ಕೀ ನೀಡಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಇವರ ಅಣ್ಣ ವರದಿಗಾರ ಆಸ್ಟಿನ್ ಪಿಂಟೋ ಮಾಧ್ಯಮ ದವರಿಗೆ ಮಾಹಿತಿ ನೀಡಿದ್ದಾರೆ.ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಅಂಗಡಿಯಿಂದ ಜ್ಯೂಸ್ ಮೆಷಿನ್ ಒಂದನ್ನು ಕಳವು ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಬೇಟಿ ನೀಡಿದ್ದಾರೆ. ಹಾಗೂ ಶ್ವಾನ ದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

11 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

11 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

12 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

12 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

12 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

12 hours ago