ಬಂಟ್ವಾಳ: ನಿಗೂಢ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ ..! vishwanews24

Featured, ಉಡುಪಿ, ದಕ್ಷಿಣ ಕನ್ನಡ

ಬಂಟ್ವಾಳ: ನಿಗೂಢ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ ..!

ಬಂಟ್ವಾಳ: ನಿಗೂಢವಾಗಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಸುಮಾರು 10 ದಿನದ ಬಳಿಕ ದಿಗಂತ್‌ ಪತ್ತೆಯಾಗಿದ್ದು, ಪೊಲಿಸರು ಆತನನ್ನು ಕರೆತರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು.

ಮಂಗಳೂರು: ವೆನ್‌ಲಾಕ್ ವಿಭಾಗೀಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಸರಕಾರದ ಒಪ್ಪಿಗೆ: ಐವನ್ ಡಿಸೋಜಾ – vishwanews24

ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ದಿಗಂತ್‌. ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು.

Leave a Reply