ಬಂಟ್ವಾಳ: ನಿಗೂಢವಾಗಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಸುಮಾರು 10 ದಿನದ ಬಳಿಕ ದಿಗಂತ್ ಪತ್ತೆಯಾಗಿದ್ದು, ಪೊಲಿಸರು ಆತನನ್ನು ಕರೆತರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು.
ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ದಿಗಂತ್. ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…