ಬಂಟ್ವಾಳ: ‘ನೆತ್ತರಕೆರೆ’ ಸಿನೆಮಾ ಚಿತ್ರೀಕರಣದ ವೇಳೆ ಸೆಟ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ.
ತುಳು ಮತ್ತು ಕನ್ನಡ ಭಾಷೆಯಲ್ಲಿ ಮೂಡಿ ಬರುತ್ತಿರುವ ಈ ಸಿನೆಮಾದ ಚಿತ್ರೀಕರಣ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಂಜನಪದವು ಎಂಬಲ್ಲಿ ನಡೆಯುತ್ತಿದೆ. ಇಲ್ಲಿ ಚಿತ್ರೀಕರಣಕ್ಕಾಗಿ ಸೆಟ್ ಹಾಕಲಾಗಿತ್ತು. ಈ ಸೆಟ್ ನ ಅಡುಗೆ ಕೋಣೆಯಲ್ಲಿ ಇಂದು ಬೆಳಗ್ಗೆ ಆಕಸ್ಮಿವಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ತಕ್ಷಣ ಚಿತ್ರತಂಡವು ಟ್ಯಾಂಕರ್ ಮೂಲಕ ನೀರು ತಂದು ಬೆಂಕಿಯನ್ನು ನಂದಿಸಿದೆ. ಆದರೆ ಅಷ್ಟರಲ್ಲಿ ಸೆಟ್ ನ ಒಂದು ಭಾಗ ಬೆಂಕಿಯಿಂದ ಹಾನಿಗೀಡಾಗಿದೆ ಎಂದು ತಿಳಿದುಬಂದಿದೆ.
‘ನೆತ್ತರಕೆರೆ’ ಕಾಂತಾರ ಸಿನೆಮಾದಲ್ಲಿ ‘ಗುರುವ’ ಪಾತ್ರದಲ್ಲಿ ನಟಿಸಿರುವ ಸ್ವರಾಜ್ ಶೆಟ್ಟಿ ನಟನೆಯ ಚಿತ್ರ. ಇದರ ಚಿತ್ರಕಥೆ ಹಾಗೂ ನಿರ್ದೇಶನ ಕೂಡ ಅವರೇ ಮಾಡುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…