Featured

ಬಂಟ್ವಾಳ: ನೆರೆ ಸಂತ್ರಸ್ತರಿಗೆ ಹತ್ತು ಸಾವಿರ ರೂ. ಸಹಾಯ ಧನ ನೀಡಿದ ಯು.ಟಿ.ಖಾದರ್ -Vishwanews24

ಬಂಟ್ವಾಳ: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆರೆ ಸಂತ್ರಸ್ತ ಸುಮಾರು 56 ಫಲಾನುಭವಿಗಳಿಗೆ ಸರಕಾರದಿಂದ ನೀಡಿದ ಹತ್ತು ಸಾವಿರ ರೂ ಮೊತ್ತದ ಚೆಕ್ ವಿತರಣೆಯನ್ನು ಪುದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕ ಮಾಜಿ ಸಚಿವ ಯು.ಟಿ.ಖಾದರ್ ನಡೆಸಿದರು.

ಬಳಿಕ ಮಾತನಾಡಿ ಮಡಿಕೇರಿಯಲ್ಲಿ ಕಳೆದ ಬಾರಿ ನೆರೆ ಸಂತ್ರಸ್ತರಿಗೆ ಪಾಕೃತಿಕ ವಿಕೋಪದಡಿಯಲ್ಲಿ ಸರಕಾರ ನೀಡಿದ ಮಾದರಿಯಲ್ಲಿ ಇಲ್ಲಿಯೂ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಗೆ ಮನವಿ ಮಾಡಲಾಗಿದೆ, ಮುಖ್ಯ ಮಂತ್ರಿ ಮನವಿಗೆ ಸ್ಪಂದಿಸುವ ಭರವಸೆ ಇದೆ ಎಂದು ಅವರು ಹೇಳಿದರು

ಪಾಕೃತಿಕ ವಿಕೋಪದಡಿಯಲ್ಲಿ ಸರಕಾರ ನೀಡುವ ಸವಲತ್ತುಗಳನ್ನು ಫಲಾನುಭವಿಗಳು ಪಡೆಯುವಂತೆ ವಿನಂತಿಸಿದರು. ನೆರೆಯ ಸಂದರ್ಭದಲ್ಲಿ ಮತ್ತು ಬಳಿಕ ಪರಿಹಾರದ ಕಾರ್ಯದಲ್ಲಿ ತಾಲೂಕಿನ ಎಲ್ಲಾ ಅಧಿಕಾರಿಗಳು ಉತ್ತಮ ವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಅವರು ಹೇಳಿದರು. ನೆರೆಯ ಸಂದರ್ಭದಲ್ಲಿ ಸಹಕಾರ ನೀಡಿದ ಸಂಘ ಸಂಸ್ಥೆಗಳನ್ನು ಗುರುತಿಸಿ ಅವರಿಗೆ ಸರಕಾರದ ವತಿಯಿಂದ ಪ್ರಶಸ್ತಿ ನೀಡಲು ಸರಕಾರದ ವತಿಯಿಂದ ವ್ಯವಸ್ಥೆ ಮಾಡಲಾಗಿದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗ್ರಾಮ ಪಂಚಾಯತ್ ಅದ್ಯಕ್ಷ ರಮ್ಲಾನ್, ., ಜಿ.ಪಂ. ಸದಸ್ಯ ರವೀಂದ್ರ ಕಂಬಳಿ,ತಾಲೂಕು ಪಂಚಾಯತ್ ಸದಸ್ಯ ಗಣೇಶ್ ತುಂಬೆ, ತುಂಬೆ ಗ್ರಾ.ಪಂ.ಅಧ್ಯಕ್ಷೆ ಹೇಮಲತಾ ಜಿ. ಗ್ರಾಪಂ.ಸದಸ್ಯರಾದ ನಜೀರ್ ಕುಂಜತ್ಕಲ, ರಿಯಾಜ್ ಕುಂಪಣಮಜಲು,ಮಹಮ್ಮದ್ ಮೋನು, ಅಬ್ದುಲ್ ಹಮೀದ್, ಭಾಸ್ಕರ ರೈ, ಅಕ್ತರ್ ಹುಸೇನ್, ಇಕ್ಬಾಲ್, ವೃಂದಾ ಪೂಜಾರಿ, ಯೋಗೀಶ್ ಪ್ರಭು, ಎಪ್.ಎಸ್.ಮಹಮ್ಮದ್ , ಹಾಸೀರ್ ಪೆರಿಮಾರ್ ಪರಂಗಿಪೇಟೆ ಮಸೀದಿ ಅಧ್ಯಕ್ಷ ಮಹಮ್ಮದ್ ಭಾವ,  ತಹಶೀಲ್ದಾರ್ ರಶ್ಮಿ. ಎಸ್.ಆರ್, ಮಾಜಿ.ಜಿ.ಪಂ.ಸದಸ್ಯ ಉಮ್ಮರ್ ಫಾರೂಕ್ ಮಾಜಿ ತಾ.ಪಂ.ಸದಸ್ಯ ಆಸೀಪ್ ಇಕ್ಬಾಲ್, ಪ್ರಮುಖರಾದ ಎಸ್ ಅಬುಬಕರ್ ಸಜೀಪ, ದಿನೇಶ್ ಶೆಟ್ಟಿ ಕೊಟ್ಟಿಂಜ, ಕೃಷ್ಣಕುಮಾರ್ ಪೂಂಜಾ, ಮಜೀದ್ ಪೆರಿಮಾರ್ , ಇಬ್ರಾಹಿಂ ವಳವೂರು, ಹಾತೀಕ್ ಪರಂಗಿಪೇಟೆ, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ‌.ಡಿ.ಒ.ಪ್ರೇಮಲತಾ, ಕಾರ್ಯದರ್ಶಿ ಅಶ್ಬಿನಿ, ಸಿಬ್ಬಂದಿಗಳಾದ ಅಬ್ದುಲ್ ಸಲಾಂ, ವಿನಯ ಮತ್ತು ಯಶೋಧ ಉಪಸ್ಥಿತರಿದ್ದರು. ‌

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

10 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

10 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

10 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

11 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

12 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

12 hours ago