ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ತಾಲೂಕಿನ ಸಜೀಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನದ ಮನೆ ಎಂದು ತಿಳಿದು ಬಂದಿದೆ. ರಾಜೇಶ್ ಪೂಜಾರಿ ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.
ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿ ಚಕ್ರ ವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಬಳಿಕ ರಾಜೇಶ್ ಪೂಜಾರಿಯ ಮೃತದೇಹ ಪತ್ತೆಯಾಗಿದೆ. ಆ ಬಳಿಕ ಸಾರ್ವಜನಿಕರಲ್ಲಿ ಸಾವಿನ ಬಗ್ಗೆ ಊಹಾಪೋಹಗಳು ಸಂದೇಹಗಳು ಹುಟ್ಟಿ ಕೊಂಡಿದೆ.
ರಾಜೇಶ್ ಸಜೀಪ ಮನೆಯಿಂದ ಬರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ವೇಳೆ ಹಳೆಯ ಪಾಣೆಮಂಗಳೂರು ಸೇತುವೆಯಲ್ಲಿ ದ್ವಿ ಚಕ್ರ ವಾಹನಕ್ಕೆ ಡಿಕ್ಕಿಯಾಗಿ ನೇತ್ರಾವತಿ ನದಿಗೆ ಬಿದ್ದು ಸಾವನ್ನಪ್ಪಿರಬಹುದಾ? ಎಂಬ ಸಂದೇಹ ವ್ಯಕ್ತವಾಗಿದೆ.
ದ್ವಿಚಕ್ರ ವಾಹನ ಅಪಘಾತವಾದ ಬಗ್ಗೆ ಸಂಶಯಗಳು ವ್ಯಕ್ತವಾಗಿದ್ದು, ಪೊಲಿಸರು ತನಿಖೆ ಆರಂಭಿಸಿದ್ದಾರೆ.ರಾಜೇಶ್ ಸಾವಿಗೆ ಇನ್ನಾವುದೋ ಕಾರಣವಿರಬಹುದಾ ? ಎಂಬ ಬಗ್ಗೆಯೂ ಪೋಲೀಸರು ತನಿಖೆಗೆ ಮುಂದಾಗಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…