Featured

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ; ತಗ್ಗು ಪ್ರದೇಶಗಳು ಜಲಾವೃತ – vishwanews24

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ; ತಗ್ಗು ಪ್ರದೇಶಗಳು ಜಲಾವೃತ

ಬಂಟ್ವಾಳ : ಸೋಮವಾರ ರಾತ್ರಿಯಿಂದ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಅಪಾಯದ ಮಟ್ಟ ತಲುಪುತ್ತಿದೆ. ಬಂಟ್ವಾಳದಲ್ಲಿ ಮಂಗಳವಾರ ಬೆಳಗ್ಗೆ ನೀರಿನ ಮಟ್ಟ ‌8.2 ಮೀ. ಗೆ ತಲುಪಿದೆ.

ಈಗಾಗಲೇ ಕೆಲವೊಂದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ.

ಬಂಟ್ವಾಳ ನಗರ ವ್ಯಾಪ್ತಿಯಲ್ಲಿ ನದಿ ನೀರು ಏರಿಕೆಯಾಗಿದ್ದು, ನದಿ ನೀರು ರಸ್ತೆಗೆ ಬಂದು ತಲುಪಿದೆ. ಪೇಟೆ ವ್ಯಾಪ್ತಿಯ ಮಕ್ಕಳು ಹೆಚ್ಚಾಗಿ ಆಟೋ ಮತ್ತು ವ್ಯಾನ್ ಗಳಲ್ಲಿ ಶಾಲೆಗೆ ತೆರಳುತ್ತಾರೆ. ನದಿಯ ತಟಗಳಲ್ಲಿರುವ ಗ್ರಾಮಾಂತರ ಪ್ರದೇಶದ ಶಾಲೆಗಳಾದ ಬಾಳ್ತಿಲ, ಪೆರ್ನೆ, ಕಡೆಶ್ವಾಲ್ಯ, ಮತ್ತು ಇನ್ನೂ ನೀರಿನ ಅಪಾಯವುಳ್ಳ ಶಾಲೆಗಳ ಸಿಆರ್ ಪಿ, ಮತ್ತು ಎಸ್.ಡಿ.ಎಂಸಿ ಸಮಿತಿಗಳಿಗೆ ತಮ್ಮ ಹಂತದಲ್ಲೇ ರಜೆ ನೀಡುವಂತೆ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಸೂಚನೆ ನೀಡಿದ್ದಾರೆ.

ಶಿಥಿಲಗೊಂಡ ಗೋಡೆಯಿರುವ ಕಟ್ಟಡಗಳು, ದುರ್ಬಲ ಶೀಟುಗಳು, ವಿದ್ಯುತ್ ಅಪಾಯದ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ಸಮರ್ಪಕವಾಗಿ ಇರುವ ತರಗತಿ ಕೊಠಡಿಗಳಲ್ಲಿ ಮಾತ್ರ ವಿದ್ಯಾರ್ಥಿಗಳನ್ನು ಕೂರಿಸಬೇಕು ಎಂದು ಕ್ಲಸ್ಟರ್ ಹಾಗೂ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿಲಾಗಿದೆ ಎಂದು ತಹಶೀಲ್ದಾರ್ ಕಛೇರಿ ಪ್ರಕಟಣೆ ತಿಳಿಸಿದೆ.

ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಪಾಣೆಮಂಗಳೂರು ಸಮೀಪದ ಆಲಡ್ಕ ಪರಿಸರದಲ್ಲಿ ಸುಮಾರು 15 ಮನೆಗಳಿಗೆ ನೀರು ನುಗ್ಗಿದೆ ಎಂದು ಸ್ಥಳೀಯ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆ ಅಂಗಡಿ ತಿಳಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

17 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

18 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

18 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

19 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

20 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

20 hours ago