ಬಂಟ್ವಾಳ: ಸಜಿಪನಡು ಗ್ರಾಮದ ತಲೆಮೊಗರುವಿನಲ್ಲಿ ಸ್ನೇಹಿತರೊಂದಿಗೆ ನೇತ್ರಾವತಿ ನದಿಯಲ್ಲಿ ಈಜಾಡಲು ಹೋಗಿ ನೀರುಪಾಲಾಗಿದ್ದ ಯುವಕನ ಮೃತದೇಹ ಉಳ್ಳಾಲ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಬುಧವಾರ ಪತ್ತೆಯಾಗಿದೆ.
ಅಶ್ವಿತ್ (19) ಶವವಾಗಿ ಪತ್ತೆಯಾದ ಯುವಕ. ತಲೆಮೊಗರು ನಾಗೇಶ್ ಗಾಣಿಗ ಅವರ ಮನೆಯಲ್ಲಿ ಮಗುವಿನ ತೊಟ್ಟಿಲು ಶಾಸ್ತ್ರ ಕಾರ್ಯಕ್ರಮದಲ್ಲಿ ಅಶ್ವಿತ್ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ ತಲೆಮೊಗರು ನೇತ್ರಾವತಿ ನದಿಯಲ್ಲಿ ಸಂಬಂಧಿಕ ಸ್ನೇಹಿತರೊಂದಿಗೆ ಅಶ್ವಿತ್ ಈಜಾಡಲು ತೆರಳಿದ್ದರು. ಈ ವೇಳೆ ಅಶ್ವಿತ್ ಮತ್ತು ಹರ್ಷ ಎಂಬಾತ ನೀರುಪಾಲಾಗಿದ್ದಾರೆ. ಈ ವೇಳೆ ಜತೆಯಲ್ಲಿದ್ದ ಇತರ ಯುವಕರು ಹರ್ಷನನ್ನು ರಕ್ಷಿಸಿ ಮೇಲಕ್ಕೆತ್ತಿದರಾದರೂ ಅಶ್ವಿತ್‌ನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಗೆಳೆಯರು ನೋಡನೋಡುತ್ತಿದ್ದಂತೇ ಅಶ್ವಿತ್ ನೀರುಪಾಲಾಗಿ ನಾಪತ್ತೆಯಾಗಿದ್ದರು.
ನಾಪತ್ತೆಯಾಗಿದ್ದ ಅಶ್ವಿನ್‌ಗಾಗಿ ಪೊಲೀಸ್, ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸುತ್ತಿದ್ದರು. ಇಂದು ಬೆಳಗ್ಗೆ ಕೋಡಿಯ ಸಮುದ್ರತೀರದಲ್ಲಿ ಆತನ ಶವ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…