ಬಂಟ್ವಾಳ : ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಾವೂರ ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ನಿವಾಸಿ ಅನ್ಸಾರ್ ಎಂಬವರ ಪುತ್ರಿ ಅಶ್ರಾ (11) ಹಾಗೂ ಇಲ್ಯಾಸ್ ಅವರ ಪುತ್ರಿ ಮರಿಯಮ್ ನಾಶಿಯಾ (14) ಎಂದು ಗುರುತಿಸಲಾಗಿದೆ.
ಮೂಲತಃ ನಾವೂರ ನಿವಾಸಿಯಾದ ಇಲ್ಯಾಸ್ ಇಂದು ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದು, ಮನೆಯವರ ಮುಂದೆ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ವೇಳೆ ಈ ಎರಡು ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ.
ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗುವುದನ್ನು ಮನೆಯವರು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…