Featured

ಬಂಟ್ವಾಳ: ಪತಿ ಹಾಗೂ ಮಗಳ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ – Vishwanews24

ಬಂಟ್ವಾಳ: ಪತಿ ಹಾಗೂ ಮಗಳ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ‌ ನಡೆದಿದೆ. ನದಿಗೆ ಹಾರುವುದನ್ನು ಪುತ್ರಿ ಹಾಗೂ ಮಹಿಳೆಯ ತಂದೆ ತಡೆಯಲು ಯತ್ನಿಸಿದರೂ ಅವರಿಂದ ತಪ್ಪಿಸಿಕೊಂಡು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ ಯಶೋಧಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಘಟನೆಯ ಕುರಿತು ಆಕೆಯ ಪುತ್ರಿ ಸಂಪ್ರೀತಾ ನೀಡಿದ ದೂರಿನಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಯಶೋಧ ಅವರು ಮೂರ್ಛೆ ರೋಗದಿಂದ ಬಳಲುತ್ತಿದ್ದು ಕೆಲವೊಂದು ಬಾರಿ ತೀವ್ರ ಕೋಪಕ್ಕೆ ಒಳಗಾಗಿ ಜಗಳ ಮಾಡುತ್ತಿದ್ದರು. ಹೀಗಾಗಿ ಯಶೋಧ ಅವರ ಗಂಡ 10 ವರ್ಷದ ಹಿಂದೆ ಅವರನ್ನು ಬಿಟ್ಟು ಹೋಗಿದ್ದರು ಎಂದು ತಿಳಿದುಬಂದಿದೆ.

ಏ.೧೫ ರಂದು ರಾತ್ರಿ ಕೂಡಾ ತಾಯಿ ಜತೆ ಜಗಳ ಮಾಡಿ ಮಲಗಿದ್ದು , ಮಂಗಳವಾರ ಬೆಳಗ್ಗೆ ಎದ್ದು ಕೆಲಸಕ್ಕೆ ಹೋಗಿದ್ದ ಯಶೋಧಾ 9 ರ ಸುಮಾರಿಗೆ ಕರೆ ಮಾಡಿ ತಾನು ಫರಂಗಿಪೇಟೆಯಲ್ಲಿದ್ದು ತನಗೆ ಬದುಕುವುದು ಇಷ್ಟವಿಲ್ಲ ಎಂದು ಕರೆ ಕಡಿತ ಮಾಡಿದ್ದರು. ಈ ವೇಳೆ ಆಕೆಯ ಪುತ್ರಿ ಹಾಗೂ ತಂದೆ ಆಟೋದಲ್ಲಿ ತಕ್ಷಣ ಸ್ಥಳಕ್ಕೆ ತೆರಳಿದಾದ ನದಿ ಕಡೆ ವೇಗವಾಗಿ ಹೋಗುತ್ತಿದ್ದು, ಓಡಿ ಹೋಗಿ ಹಿಡಿದಾಗ ತಪ್ಪಿಸಿಕೊಂಡು ಏಕಾಏಕಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago