ಬಂಟ್ವಾಳ: ಬಂಟ್ವಾಳ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ಕಾಂಗ್ರೆಸ್ ನ ವಾಸು ಪೂಜಾರಿ ಲೊರೆಟ್ಟೋ ಅಧ್ಯಕ್ಷರಾದರೆ, ಉಪಾಧ್ಯಕ್ಷರಾಗಿ ಎಸ್ ಡಿಪಿಐನ ಮೂನಿಶ್ ಅಲಿ ಚುನಾಯಿತರಾಗಿದ್ದಾರೆ.
ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎಸ್ ಡಿಪಿಐ ಬೆಂಬಲದಿಂದ ಕಾಂಗ್ರೆಸ್ ನ ವಾಸು ಪೂಜಾರಿ ಆಯ್ಕೆಯಾದರೆ, ಉಪಾಧ್ಯಕ್ಷ ಸ್ಥಾನಕ್ಕೆ ಎಸ್ ಡಿಪಿಐನ ಮೂನಿಶ್ ಅಲಿ ಆಯ್ಕೆಯಾಗಲು ಕಾಂಗ್ರೆಸ್ ಬೆಂಬಲ ನೀಡಿದೆ. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಎ.ಗೋವಿಂದಪ್ರಭು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹರಿಪ್ರಸಾದ್ ಸ್ಪರ್ಧಿಸಿದ್ದರು.
ಒಟ್ಟು 27 ಸದಸ್ಯ ಬಲದ ಬಂಟ್ವಾಳ ಪುರಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ 11 ಸ್ಥಾನಗಳನ್ನು ಹೊಂದಿದ್ದರೆ, ಎಸ್ ಡಿಪಿಐ 4 ಸ್ಥಾನ ಹೊಂದಿದೆ. ಒಂದು ಸ್ಥಾನ ತೆರವಾಗಿದೆ.
ಇಂದು ನಡೆದ ಚುನಾವಣೆಯಲ್ಲಿ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಪಾಲ್ಗೊಂಡಿದ್ದರಿಂದ ಬಿಜೆಪಿ ಸ್ಥಾನ ಬಲ 13ಕ್ಕೆ ಏರಿತ್ತು. ಆದರೆ ಕಾಂಗ್ರೆಸ್ – ಎಸ್ ಡಿಪಿಐ ‘ಮೈತ್ರಿ’ ಬಿಜೆಪಿಗೆ ಮುಳುವಾಯಿತು.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…