ಬಂಟ್ವಾಳ: ಪೊಲೀಸ್ ದಾಳಿ – ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿ ಮೂವರು ವಶಕ್ಕೆ – Vishwanews24
ಬಂಟ್ವಾಳ: ಪೊಲೀಸ್ ದಾಳಿ – ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿ ಮೂವರು ವಶಕ್ಕೆ
ಬಂಟ್ವಾಳ: ಇಂದು ಬೆಳ್ಳಗ್ಗೆ ಬಂಟ್ವಾಳದ ಹಲವೆಡೆ ಪೊಲೀಸರು ದಾಳಿ ನಡೆಸಿ ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಬಂಧಿಸಿ ತಹಶೀಲ್ದಾರ್ ಬಳಿ ಹಾಜರು ಪಡಿಸಿದ್ದಾರೆ.
ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಫ್ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್, ಫಿರೋಜ್ ಖಾನ್, ರಾಝಿಕ್ ಅವರನ್ನು ಬಂಧಿಸಿ, ಏಳು ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮೂವರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಅವರನ್ನು ಪ್ರತಿಬಂಧಕ ಕಾಯ್ದೆಯಡಿ ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ಕಾರ್ಯನಿರ್ವಾಹಕ ನ್ಯಾಯಾಧೀಶರೂ ಆಗಿರುವ ಬಂಟ್ವಾಳ ತಹಶೀಲ್ದಾರ್ ಡಾ. ಸ್ಮಿತಾ ರಾಮು ಅವರ ಮುಂದೆ ಹಾಜರುಪಡಿಸಿದ್ದಾರೆ.
ಇನ್ನು ಬಂಟ್ವಾಳ ಬಿ.ಸಿ.ರೋಡ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
