ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಚೂರಿಯಿಂದ ದಾಳಿ ನಡೆಸಿದ ಘಟನೆ ನಡೆದಿದೆ.
ಸ್ಥಳೀಯ ವ್ಯಾಪಾರಿ ಜವ್ವರ್ (28) ಎಂಬಾತ ವಿದ್ಯಾರ್ಥಿನಿಯ ಮೇಲೆ ಏಕಾಏಕಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪ್ರೀತಿ ವಿಚಾರವೇ ದಾಳಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಘಟನೆಯಲ್ಲಿ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವಗೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾಳಿಯ ಬಳಿಕ ಬಸ್ ನಿಲ್ದಾಣದಲ್ಲಿ ರಕ್ತದ ಗುರುತುಗಳು ಕಂಡುಬಂದಿವೆ.
ಗಾಯಗೊಂಡ ವಿದ್ಯಾರ್ಥಿನಿ ಹಾಗೂ ಆರೋಪಿ ಇಬ್ಬರೂ ಬಂಟ್ವಾಳದ ಮೊಂತಿಮಾರ್ ಪಡ್ಪು ನಿವಾಸಿಗಳಾಗಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…