Featured

ಬಂಟ್ವಾಳ: ಬಸ್ಸಿನಲ್ಲಿ 20ಲಕ್ಷ ರೂ ಮೌಲ್ಯದ ಚಿನ್ನ ಕಳವು ಪ್ರಕರಣ: ಆರೋಪಿ ಬಂಧನ – vishwanews24

ಬಂಟ್ವಾಳ: ಬಸ್ಸಿನಲ್ಲಿ 20ಲಕ್ಷ ರೂ ಮೌಲ್ಯದ ಚಿನ್ನ ಕಳವು ಪ್ರಕರಣ: ಆರೋಪಿ ಬಂಧನ

ಬಂಟ್ವಾಳ: ಸುಮಾರು ಐದು ತಿಂಗಳ ಹಿಂದೆ ಬಸ್ ನಲ್ಲಿ ಬ್ಯಾಗ್ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಬಂಧಿಸಿ, ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

2025ರ ನವೆಂಬರ್ 19ರಂದು ಬ್ರಹ್ಮಾವರ ಮೂಲದ ದಂಪತಿಗಳು ದುರ್ಗಾಂಬಾ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿರುವ ‘ಸಮುದ್ರ ಹೋಟೆಲ್’ ಬಳಿ ಬಸ್ ನಿಂತಿದ್ದ ಸಂದರ್ಭದಲ್ಲಿ, ದಂಪತಿಗಳ ಬ್ಯಾಗ್ನಲ್ಲಿದ್ದ 180 ಗ್ರಾಂ ತೂಕದ (ಅಂದಾಜು 20 ಲಕ್ಷ ರೂ. ಮೌಲ್ಯದ) ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:👇

ಪೊಲೀಸರು ತನಿಖೆ ಚುರುಕುಗೊಳಿಸಿ, ಕೃತ್ಯ ಎಸಗಿದ ಮಧ್ಯಪ್ರದೇಶ ನಿವಾಸಿ ಸಮದ್ ಖಾನ್ (37) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ಕಳವು ಮಾಡಲಾದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಎ.ಎಸ್.ಪಿ ಯಶ್ ಕುಮಾರ್ ಶರ್ಮಾ ನಿರ್ದೇಶನದಂತೆ, ತನಿಖಾಧಿಕಾರಿ ಹಾಗೂ ಬಂಟ್ವಾಳ ನಗರ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ನೇತೃತ್ವದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವಿಜಯ್ ಕುಮಾರ್. ಸುರೇಶ್ ಕುಮಾರ್, ರಾಜೇಶ್, ಇರ್ಷಾದ್ ಪಿ. ಬಸವರಾಜ್, ವಿಜಯ್ ಕುಮಾರ್, ಮಪಿಸಿ ರೇವತಿ ಹಾಗೂ ಜಿಲ್ಲಾ ಪೊಲೀಸ್ ಘಟಕದ ಗಣಕಯಂತ್ರ ಘಟಕದ ಸಂಪತ್ ಕುಮಾರ್ ಮತ್ತು ದಿವಾಕರ್ ಈ ಯಶಸ್ವಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:👇

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

17 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

17 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

17 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

21 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

21 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

21 hours ago