ಬಂಟ್ವಾಳ: ಖಾಸಗಿ ಸಿ.ಸಿ.ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಸರ್ಕಲ್ ಬಳಿ ಇಂದು ನಡೆದಿದೆ.
ಕೇರಳ ಮೂಲದ ವಿಶ್ವನಾಥ ಶೆಟ್ಟಿ ಗಂಭೀರವಾಗಿ ಗಾಯಗೊಂಡ ಕಾರು ಚಾಲಕ.
ಬಿಸಿರೋಡಿನ ಕಡೆಯಿಂದ ಮೆಲ್ಕಾರ್ ಕಡೆಗೆ ಕಾಂಕ್ರೀಟ್ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್-ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ವಿರುದ್ಧ ದಿಕ್ಕಿನಲ್ಲಿ ಬಂದು ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ನಿಯಮ ಮೀರಿದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಜೊತೆಗೆ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…