Featured

ಬಂಟ್ವಾಳ: ಬೆಂಗಳೂರಿಗೆ ಹೋಗುತ್ತಿರುವುದಾಗಿ ತಿಳಿಸಿದ್ದ ವ್ಯಕ್ತಿ ನಾಪತ್ತೆ ; ದೂರು ದಾಖಲು – vishwanews24

ಬಂಟ್ವಾಳ: ಬೆಂಗಳೂರಿಗೆ ಹೋಗುತ್ತಿರುವುದಾಗಿ ತಿಳಿಸಿದ್ದ ವ್ಯಕ್ತಿ ನಾಪತ್ತೆ ; ದೂರು ದಾಖಲು

ಬಂಟ್ವಾಳ:ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ @ ಕೇಶವ ( 37) ಕಾಣೆಯಾದವರು.

ದೂರಿನಲ್ಲಿ ಏನಿದು?

ದೂರುದಾರರ ಪ್ರಕಾರ, ಮೊಡಾಂಕಾಪುವಿನಲ್ಲಿರುವ 7Spices India Pvt Ltd ನಲ್ಲಿ ಸೆಲ್ಸ್‌ ಮ್ಯಾನ ಆಗಿ ಕೆಲಸ ಮಾಡುತ್ತಿದ್ದ ಚೆನ್ನಕೇಶವ ಅವರು, ಎಂದಿನಂತೆ ಅ.25ರಂದು ಮನೆಯಿಂದ ಹೋಗಿ ಅಲ್ಲಿಂದ ಮಸಾಲೆ ಪದಾರ್ಥಗಳನ್ನು ಲೈನ್‌ ಸೆಲ್ಸ ಬಗ್ಗೆ ವಾಹನದಲ್ಲಿ ಚಾಲಕ ಹರಿದಾಸ್‌ ರವರ ಜೊತೆಗೆ ಹೋಗಿ ಲೈನ್‌ ಕೆಲಸ ಮುಗಿಸಿ ಮಧ್ಯಾಹ್ನ 2.30 ಗಂಟೆಗೆ ಪಂಪುವೆಲ್‌ನಲ್ಲಿ ಇಳಿದು ಬೇರೆ ಕೆಲಸ ಮುಗಿಸಿ ಕಂಪೆನಿಗೆ ಬರುವುದಾಗಿ ತಿಳಿಸಿ ಹೋಗಿದ್ದರು.

ನಂತರ ಮದ್ಯಾಹ್ನ 3.30 ಗಂಟೆಗೆ ಚನ್ನಕೇಶವ @ ಕೇಶವ ಅವರು ದೂರುದಾರ ಅತ್ತಿಗೆಗೆ ಕರೆ ಮಾಡಿ ತಾನು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದು, ಮೊಬೈಲ್‌ನಲ್ಲಿ ಚಾರ್ಜ್‌ ಇಲ್ಲದ ಕಾರಣ ಸ್ವಿಚ್‌ ಆಫ್ ಆಗುತ್ತದೆ. ನಾಲ್ಕು ದಿನ ಬಿಟ್ಟು ಕರೆ ಮಾಡುವುದಾಗಿ ತಿಳಿಸಿ ಈವರೆಗೆ ಕರೆ ಮಾಡಿರುವುದಿಲ್ಲ.

ಚನ್ನಕೇಶವ ಸಂಬಂಧಿಕರ ಮನೆಗೂ ,ಕಂಪೆನಿಯ ಕೆಲಸಕ್ಕೂ ಹಾಗೂ ಮನೆಗೆ ಬಾರದೆ ಕಾಣೆಯಾಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. ಕಾಣೆಯಾದ ವ್ಯಕ್ತಿಯ ಸುಳಿವು ಸಿಕ್ಕಲ್ಲಿ ( ಮೊ.9535971261) ಅವರನ್ನು ಸಂಪರ್ಕಿಸಲು ಕೋರಲಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

4 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

4 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

5 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

5 hours ago