ಮಂಗಳೂರು/ಉಡುಪಿ: ದ. ಕ. ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ ಮತ್ತು ಉಡುಪಿ ಜಿಲ್ಲೆಯ ಉಡುಪಿ, ಬೈಂದೂರು ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರಕಾರ ಘೋಷಣೆ ಮಾಡಿದೆ. ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ಕುಶಾಲನಗರ ತಾಲೂಕುಗಳನ್ನು ಕೂಡ ಬರ ಪೀಡಿತ ತಾಲೂಕುಗಳನ್ನಾಗಿ ಸರಕಾರವು ಘೋಷಿಸಿದೆ.
ಈ ತಾಲೂಕುಗಳನ್ನು ಬರ ತಾಲೂಕಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಈ ಹಿಂದೆ ರಾಜ್ಯ ಸರಕಾರ ಸೂಚನೆ ನೀಡಿತ್ತು. ಅದರಂತೆ ಕಂದಾಯ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳು ಈ ತಾಲೂಕುಗಳಲ್ಲಿ ಬಿದ್ದಿರುವ ಮಳೆಯ ಪ್ರಮಾಣ ಸಹಿತ ವಿವಿಧ ಆಯಾಮ ಪರಿಶೀಲಿಸಿ ಸರಕಾರಕ್ಕೆ ವರದಿ ಸಲ್ಲಿಸಿದ್ದರು.
ಅದರಂತೆ ಸರಕಾರ ಗುರುವಾರ ಹೆಚ್ಚುವರಿ ಬರ ತಾಲೂಕುಗಳ ಪಟ್ಟಿಯಲ್ಲಿ ಈ ತಾಲೂಕುಗಳನ್ನು ಸೇರಿಸಿ ಘೋಷಣೆ ಮಾಡಿದೆ. ಬರ ಘೋಷಣೆಯ ಬಳಿಕ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಸ್ಥಳೀಯಾಡಳಿತಕ್ಕೆ ಅವಕಾಶ ಹೆಚ್ಚಲಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಮೂಲಗಳು ಬತ್ತುವ ಅಥವಾ ಅಂತರ್ಜಲ ಮಟ್ಟ ಕುಸಿಯುವ ಪರಿಸ್ಥಿತಿ ಎದುರಾದರೆ, ತುರ್ತು ಕುಡಿಯುವ ನೀರು ಪೂರೈಕೆಗೆ ಲಭ್ಯ ಅನುದಾನ ಬಳಸಬಹುದಾಗಿದೆ.
ಬರ ನಿರ್ವಹಣೆಗೆ ಸರಕಾರದಿಂದ ಬಿಡುಗಡೆಯಾಗುವ ವಿಶೇಷ ಅನುದಾನದ ಜತೆಗೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಅವರ ಪಿ. ಡಿ. ಖಾತೆಯಲ್ಲಿರುವ ಅನುದಾನವನ್ನೂ ಅಗತ್ಯಕ್ಕೆ ಅನುಗುಣವಾಗಿ ಬಳಸಿಕೊಳ್ಳಲು ಅವಕಾಶವಿದೆ.
ಕುಡಿಯುವ ನೀರು ಪೂರೈಕೆ, ನೀರಿನ ಮೂಲಗಳ ನಿರ್ವಹಣೆ, ತುರ್ತು ಕಾಮಗಾರಿಗಳು ಸಹಿತ ಬರ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯವಾಗುವ ವಿವಿಧ ಕಾರ್ಯಗಳಿಗೆ ಈ ಹಣವನ್ನು ಬಳಸಬಹುದಾಗಿದೆ. ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಳಸ ಸಹಿತ ಒಟ್ಟು 22 ತಾಲೂಕುಗಳನ್ನು ಈ ಬಾರಿ ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ.
“ಬರಪೀಡಿತ ತಾಲೂಕು ಘೋಷಣೆಯಿಂದಾಗಿ ಹೆಚ್ಚುವರಿಯಾಗಿ ಬೆಳೆ ಪರಿಹಾರ, ಕುಡಿಯುವ ನೀರಿನ ನಿರ್ವಹಣೆ ಮೊದಲಾದ ಸೌಲಭ್ಯಗಳು ದೊರೆಯಲಿವೆ”.
*ರಾಜು ಕೆ., ಅಪರ ಜಿಲ್ಲಾಧಿಕಾರಿ, ದ.ಕ.
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…
ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…
ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…
ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…