ಬಂಟ್ವಾಳ : ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ ಘಟನೆ ನಡೆದಿದೆ.
ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ತಂಡ ದಾಳಿ ನಡೆಸಿರುವ ಮಾಹಿತಿ ಬಂದಿದ್ದು, ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರವಾಗಿ ದಾಳಿ ನಡೆದಿದೆ ಎನ್ನಲಾಗಿದೆ. ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ದಾಳಿ ನಡೆದಿದೆ. ಮಾರಣಾಂತಿಕವಾಗಿ ಹಲ್ಲೆಗೊಳಗಾದ ಇಬ್ಬರು ಯುವಕರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ದಾಳಿ ನಡೆದಿದ್ದು, ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಕೃತ್ಯ ಎಸಗಿದೆ. ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆದಿದ್ದು, ಕಾಲು ಮತ್ತು ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದೆ.
ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಾಹಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…