ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ಕೇರಳ ಮೂಲದ ಮತ್ತಿಬ್ಬರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ನಡೆದಿದೆ.
ಕೊಟ್ಟಾಂ ನಿವಾಸಿ ಬಾಬು (46) ಮತ್ತು ಸಂತೋಷ್ ಅಲ್ಫೊನ್ಸಾ(46) ಮೃತಪಟ್ಟ ದುರ್ದೈವಿಗಳು. ಹೆನ್ರಿ ಕಾರ್ಲೊ ಎಂಬವರಿಗೆ ಸೇರಿದ ಮನೆಯಾಗಿದೆ. ಕಾರ್ಲೋ ಅವರ ಮನೆಯ ತೋಟದ ಕೆಲಸಕ್ಕೆ ಕೇರಳ ಮೂಲದ ಕಾರ್ಮಿಕರು ಬಂದು ಆ ಮನೆಯಲ್ಲಿ ನೆಲಸಿದ್ದರು.
ನಾಲ್ವರು ಅನೇಕ ವರ್ಷಗಳಿಂದ ಇವರ ತೋಟದ ಕೆಲಸ ಮಾಡುತ್ತಿದ್ದರು. ಕಾರ್ಲೋ ಅವರ ಮನೆಯ ಹತ್ತಿರದಲ್ಲಿ ಆ ನಾಲ್ವರು ಕಾರ್ಮಿಕರಿಗೆ ಪ್ರತ್ಯೇಕ ಮನೆ ನೀಡಿದ್ದರು. ಆದರೆ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಗುಡ್ಡ ಕುಸಿದು ಮನೆ ಮೇಲೆ ಬಿದ್ದಿತ್ತು. ಈ ಸಂದರ್ಭದಲ್ಲಿ ನಾಲ್ವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆಯೇ ಕೇರಳದ ಪಾಲಕ್ಕಾಡ್ ನಿವಾಸಿ ಬಿಜು(45) ಎಂಬವರು ಮೃತಪಟ್ಟಿದ್ದರು. ಇಂದು ಕೂಡ ಮತ್ತೆ ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತ ಸಂಖ್ಯೆ 3ಕ್ಕೆ ಏರಿದೆ. ಗುಡ್ಡ ಕುಸಿದಿದ್ದರಿಂದ ಜೆಸಿಬಿ ಬಳಸಿ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಮಣ್ಣು ತೆರವು ಮಾಡಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…