Featured

ಬಂಟ್ವಾಳ: ಮಗುವಿನ ಅನಾರೋಗ್ಯ ಹಿನ್ನೆಲೆ – ಉಕ್ರೇನ್‌ ಕುಟುಂಬದಿಂದ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ – Vishwanews24

ಬಂಟ್ವಾಳ: ಮಗುವಿನ ಅನಾರೋಗ್ಯ ಹಿನ್ನೆಲೆ – ಉಕ್ರೇನ್‌ ಕುಟುಂಬದಿಂದ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ

ಬಂಟ್ವಾಳ: ಕಾಂತಾರ ಸಿನಿಮಾ‌ದ ಮೂಲಕ ತುಳುನಾಡಿನ ದೈವಗಳ‌ ಮಹತ್ವ ಜಗತ್ತಿನೆಲ್ಲೆಡೆ‌ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್ ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ.

ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಕೊರಗಜ್ಜನ ಕೋಲದಲ್ಲಿ ಹೇಳಿದ್ದ ಹರಕೆಯನ್ನು ತೀರಿಸಿರುವ ಕುಟುಂಬ ಇದೀಗ ಸಂತೃಪ್ತ ಮನೋಭಾವದೊಂದಿಗೆ ಉಕ್ರೇನ್ ಗೆ ಹೊರಡಲು ಸಜ್ಜಾಗಿ ನಿಂತಿದೆ.

ಬೆಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಬಸ್​ಗೆ ಬೈಕ್​​ ಡಿಕ್ಕಿ.. ಇಬ್ಬರು ಸವಾರರು ಸ್ಥಳದಲ್ಲೇ ಸಾವು – Vishwanews24

ಕಳೆದ ಕೆಲ ತಿಂಗಳ ಹಿಂದೆ ಉಕ್ರೇನ್ ನಿಂದ ಭಾರತ ಪ್ರವಾಸ ಕೈಗೊಂಡಿದ್ದ ಉಕ್ರೇನ್ ಪ್ರಜೆಗಳಾದ ಆ್ಯಂಡ್ರೋ, ಪತ್ನಿ ಎಲೆನಾ ಹಾಗೂ ಮಗ ಮ್ಯಾಕ್ಸಿಂ ಉಡುಪಿಯ ಮಲ್ಪೆ ಕಡಲ ತೀರಕ್ಕೆ ಬಂದಿದ್ದರು. ಈ ಸಂದರ್ಭ ಉಡುಪಿಯ ಗೋಶಾಲೆಗೆ ತೆರಳಿದ್ದ ಈ ಕುಟುಂಬ ನಾಡಿ ನೋಡಿ ಔಷಧಿ ಕೊಡುವ ಭಕ್ತಿ ಭೂಷಣ್ ಪ್ರಭೂಜಿಯವರನ್ನು ಭೇಟಿ ಮಾಡಿದ್ದರು. ಈ ಸಂದರ್ಭ ಅನಾರೋಗ್ಯಕ್ಕೆ ಒಳಗಾಗಿದ್ದ ಮಗನ ವಿಚಾರವನ್ನು ಉಕ್ರೇನ್ ದಂಪತಿ ಗುರೂಜಿಯವರಲ್ಲಿ ತಿಳಿಸಿದ್ದು, ಅದರಂತೆ ದೇಸಿ ದನದ ಜೊತೆಗೆ ವಿಹಾರ ಸಹಿತ ನಾಟಿ ಚಿಕಿತ್ಸೆ ಆರಂಭಿಸಿದ್ದರು. ಹಾಗಾಗಿ ಕಳೆದ ಮೂರು ತಿಂಗಳಿನಿಂದ ಕುಮ್ಡೇಲುವಿನ ಶ್ರೀ ರಾಧಾ ಸುರಭೀ ಗೋಮಂದಿರದಲ್ಲಿ‌ ವಾಸ್ತವ್ಯ ಇದ್ದರು.

ಚಿಕ್ಕಮಂಗಳೂರು : ನಾಳೆಯಿಂದ ದತ್ತಮಾಲೆ ಅಭಿಯಾನ .. 1,500 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ – Vishwanews24

ಜನ್ಮಾಷ್ಟಮಿಯ ಸಂದರ್ಭ ನಡೆದ ಕೊರಗಜ್ಜನ ಕೋಲದಲ್ಲಿ ಅನಾರೋಗ್ಯಕ್ಕೆ ಪರಿಹಾರ ನೀಡುವಂತೆ ಕೋರಿಕೊಂಡಿದ್ದರಲ್ಲದೆ, ಅಗೇಲು ಸೇವೆ ನೀಡುವುದಾಗಿ ಹರಕೆ ಹೇಳಿದ್ದರು. ಇದೀಗ ಮಗ ಮ್ಯಾಕ್ಸಿಂ ಗುಣಮುಖನಾಗಿರುವ ಹಿನ್ನೆಲೆ ಅಜ್ಜನ ಪವಾಡಕ್ಕೆ ಋಣಿಯಾಗಿ ಈ ಕುಟುಂಬ ಶುಕ್ರವಾರ ರಾತ್ರಿ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಭಕ್ತಿಭೂಷಣ್ ದಾಸ್ ಪ್ರಭೂಜಿ, ಪದ್ಮನಾಭ ಗೋವಿನ ತೋಟ, ರಾಮಚಂದ್ರ ಮಾರಿಪಳ್ಳ, ಯಾದವ ಕೊಡಂಗೆ, ನವೀನ್ ಮಾರ್ಲ ಮೊದಲಾದವರ ಉಪಸ್ಥಿತಿಯಲ್ಲಿ ಅಗೇಲು ಸೇವೆ ನಡೆದಿದ್ದು, ಉಕ್ರೇನ್ ಕುಟುಂಬವೂ ಸಂತೃಪ್ತ ಮನೋಭಾವದಿಂದ ಭಾಗವಹಿಸಿತ್ತು. ಈ ಕುಟುಂಬ ಇನ್ನೆರಡು ದಿನದಲ್ಲಿ ಟರ್ಕಿಗೆ ಪ್ರಯಣಿಸಿ, ಬಳಿಕ ತಮ್ಮ ತವರು ಉಕ್ರೇನ್ ಗೆ ಪಯಣ ಬೆಳೆಸಲಿದ್ದಾರೆ.

– ಮೌನೇಶ ವಿಶ್ವಕರ್ಮ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago