ಬಂಟ್ವಾಳ: ಸಾಲೆತ್ತೂರಿನಲ್ಲಿ ಅನ್ಯ ಧರ್ಮದ ಯುವಕರ ತಂಡವೊಂದು ಮದುವೆ ಸಂಭ್ರಮದಲ್ಲಿ ತುಳುನಾಡಿನ ಕೊರಗಜ್ಜನ ವೇಷ ಧರಿಸಿ ಅವಹೇಳನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ವರ ಉಮರುಲ್ ಬಾಷಿತ್ ನನ್ನು ಕೇರಳದ ಕೊಚ್ಚಿಯ ನಡುಂಬನ್ ಶೇರಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೇರಳದ ಕೊಚ್ಚಿಯ ನಡುಂಬನ್ ಶೇರಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಆರೋಪಿಯನ್ನು ಇದೀಗ ವಿಟ್ಲ ಠಾಣಾ ಪೊಲೀಸರು ಕರೆದುಕೊಂಡು ಬರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ :
ಉಪ್ಪಳದ ಯುವಕನ ಜೊತೆ ನಡೆದಿದ್ದ ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆಯಲ್ಲಿ ವಧುವಿನ ಮನೆಗೆ ವರನ ಸ್ನೇಹಿತ ಬಳಗ ಆಗಮಿಸಿದ್ದು, ಈ ವೇಳೆ ವರ ಕೊರಗಜ್ಜರನ್ನು ಹೋಲುವ ವೇಷ ಭೂಷಣ ಧರಿಸಿದ್ದರು. ಈ ವೇಳೆ ಮದುಮಗ ತಲೆಗೆ ಅಡಿಕೆ ಹಾಳೆ ಟೋಪಿ, ಮುಖಕ್ಕೆ ಕಪ್ಪು ಬಣ್ಣ ಹಚ್ಚಿಕೊಂಡು ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದ ಆರೋಪ ವ್ಯಕ್ತವಾಗಿ ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಈ ಸಂಬಂಧ ವಿಟ್ಲ ಪಡ್ನೂರು ಗ್ರಾಮದ ವ್ಯಕ್ತಿಯೊಬ್ಬರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹಿಂದೂಗಳ ಧಾರ್ಮಿಕ ಭಾವನೆಗೆ ಅಪಮಾನಗೊಳಿಸಿ ಧಕ್ಕೆ ತಂದಿದ್ದ, ವರ,ವಧುವಿನ ಮನೆಯವರು ಹಾಗೂ ಕೃತ್ಯದಲ್ಲಿ ತೊಡಗಿರುವ ವರನ ಸ್ನೇಹಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…