ಬಂಟ್ವಾಳ :ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ನಡೆದಿದೆ.
ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಅವಿವಾಹಿತ ಯುವಕ.ಅಕ್ಷಿತ್ ಅವರು ಮಂಗಳೂರು ಖಾಸಗಿ ಕಂಪೆನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸುಮಾರು 4 ಗಂಟೆಗೆ ಹೊರಟಿದ್ದ.ಅಂದಾಜು 4.30 ಗಂಟೆಗೆ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆದಾಗಲೇ ಆತ ಮೃತಪಟ್ಟಿದ್ದಾನೆ.
ಮುಂಜಾವಿನ ವೇಳೆ ನಿದ್ದೆಯ ಮಂಪರಿನಲ್ಲಿ ಅಥವಾ ಇನ್ನಾವುದೇ ಕಾರಣದಿಂದ ಅಪಘಾತ ಸಂಭವಿಸಿದೆ ಎಂಬುದು ಇನ್ನು ತನಿಖೆಯ ವೇಳೆ ತಿಳಿಯಬೇಕಾಗಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…