ಮೂಡಿಗೆರೆ: ಬಂಟ್ವಾಳ ಮೂಲದ ಮಹಮ್ಮದ್ ಸಾವದ್ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಯುವಕನೊರ್ವನ ಶವ ಎಸೆದು ಹೋಗಿದ್ದ ಪ್ರಕರಣ ಜಾಡು ಹಿಡಿದ ಪೊಲೀಸರಿಗೆ ಕೊಲೆಯಾದ ಯುವಕ ಬಂಟ್ವಾಳದ ಸಾವದ್ ಎಂದು ಪತ್ತೆಯಾಗಿತ್ತು.
ತನಿಖೆ ನಡೆಸಿದ ಪೊಲೀಸರು ಗುರುವಾಯನಕೆರೆಯಲ್ಲಿ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಿದ್ದಾರೆ.
ಪ್ರಕರಣ ಹಿನ್ನಲೆ:
ಪ್ರಸಿದ್ದ ಪ್ರವಾಸಿ ತಾಣವಾದ ದೇವರಮನೆಯಲ್ಲಿ ಜೂನ್ 8 ರಂದು ಕೊಳೆತ ಸ್ಥಿತಿಯಲ್ಲಿ ಅಪರಚಿತ ಶವವೊಂದು ಪತ್ತೆ ಆಗಿತ್ತು. ಅಂದು ಬಣಕಲ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ನಿನ್ನೆ ಆರೋಪಿಗಳನ್ನು ಬಂಧಿಸಿ ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಗಾಂಜಾ ವ್ಯವಹಾರ :
ಪೊಲೀಸರ ಪ್ರಾಥಮಿಕ ತನಿಖೆಯಿಂದ ಈ ಕೊಲೆ ಮಾದಕವಸ್ತು ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ. ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದರು ಎಂದು ತಿಳಿದುಬಂದಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…