Featured

ಬಂಟ್ವಾಳ: ಮಹಿಳೆಯೊಂದಿಗೆ ಗ್ರಾ.ಪಂ ಉಪಾಧ್ಯಕ್ಷ ಅಸಭ್ಯ ವರ್ತನೆ; ಬಿಜೆಪಿ ಪಕ್ಷದಿಂದ ಉಚ್ಚಾಟನೆ – vishwanews24

ಬಂಟ್ವಾಳ: ಮಹಿಳೆಯೊಂದಿಗೆ ಗ್ರಾ.ಪಂ ಉಪಾಧ್ಯಕ್ಷ ಅಸಭ್ಯ ವರ್ತನೆ; ಬಿಜೆಪಿ ಪಕ್ಷದಿಂದ ಉಚ್ಚಾಟನೆ

ಬಂಟ್ವಾಳ : ಜಮೀನೊಂದರ ದಾರಿ ವಿವಾದದ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಇಕ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ರಸ್ತೆ ವಿವಾದ ಸಂಬಂಧ ಮಹಿಳೆ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಪದ್ಮನಾಭ ಸಫಲ್ಯ ಮನೆ ದಾರಿಗೆ ಗೇಟು ಅಳವಡಿಸಿರುವುದು ಪ್ರಶ್ನಿಸಿದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಸಂಬಂಧ ಮಹಿಳೆ ಪದ್ಮನಾಭ ಸಫಲ್ಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಪದ್ಮನಾಭ ಸಫಲ್ಯ ಅವರ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಇಕ್ಕಿದು ಗ್ರಾ.ಪಂ. ಉಪಾಧ್ಯಕ್ಷನಾಗಿದ್ದ ಪದ್ಮನಾಭ ಸಫಲ್ಯ ಗೇಟ್ ಹಾಕಿ ದಾರಿ ಬಂದ್ ಮಾಡುವುದನ್ನು ಸ್ಥಳಕ್ಕಾಗಮಿಸಿದ ಮಹಿಳೆ ವಿಡಿಯೋ ಮಾಡುತ್ತಿದ್ದರು. ಈ ಸಂದರ್ಭ ಏಕಾಏಕಿ ಸಿಟ್ಟಾದ ಪದ್ಮನಾಭ ಅಸಭ್ಯವಾಗಿ ವರ್ತಿಸಿದ್ದಾನೆ. ಅಕ್ಕಪಕ್ಕದ ಎರಡು ಮನೆಗಳಿಗೆ ಹೋಗುವ ದಾರಿಯ ಜಾಗದ ತಕರಾರಿನ ಹಿನ್ನೆಲೆ ಈ ರೀತಿಯಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಇಕ್ಕಿದು ಗ್ರಾ.ಪಂ.ಉಪಾಧ್ಯಕ್ಷ ಪದ್ಮನಾಭ ಸಫಲ್ಯರನ್ನು ಭಾರತೀಯ ಜನತಾ ಪಾರ್ಟಿಯ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಮಹಿಳೆಯರಿಗೆ ಗೌರವ ಮತ್ತು ಪ್ರಾತಿನಿಧ್ಯ ಕೊಡುವ ಪಕ್ಷದಲ್ಲಿ ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡು ಪಕ್ಷದ ಘನತೆ, ಗೌರವ ಹಾಗೂ ವರ್ಚಸ್ಸಿಗೆ ಘಾಸಿ ಉಂಟು ಮಾಡಿರುವ ಕಾರಣಕ್ಕಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

16 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

16 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

16 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

17 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

17 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

17 hours ago