Featured

ಬಂಟ್ವಾಳ: ಮಾಣಿಲ ಗ್ರಾ.ಪಂ. ಉಪಚುನಾವಣೆ : ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್‌ ಜಯ -Vishwanews24

ಬಂಟ್ವಾಳ: ಮಾಣಿಲ ಗ್ರಾ.ಪಂ. ಉಪಚುನಾವಣೆ : ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್‌ ಜಯ -Vishwanews24

ಬಂಟ್ವಾಳ, : ಸೋಮವಾರ ನಡೆದ ಮಾಣಿಲ ಗ್ರಾಪಂ ಉಪಚುನಾವಣೆಯ ಮತ ಎಣಿಕೆ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಬುಧವಾರ ನಡೆದಿದ್ದು, ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ ಕೊಮ್ಮುಂಜೆ ಜಯಗಳಿಸಿದ್ದಾರೆ.

ಈ ಹಿಂದೆ ನಡೆದ ಚುನಾವಣೆಯಲ್ಲಿ ರಾಜೇಶ್ ಕುಮಾರ್ ಬಾಳೆಕಲ್ಲು ಅವರು ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರು. ಎರಡು ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿದ ಕಾರಣದಿಂದಾಗಿ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೇಶ್ ಕುಮಾರ್ ಬಾಳೆಕಲ್ಲು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಸಲಾಗಿತ್ತು.

ಇದನ್ನೂ ಓದಿ :ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ ನೋವಿಗೆ ಹೋಲಿಸಿದರೆ ನನ್ನ ನೋವು ಏನೂ ಅಲ್ಲ : ಮಮತಾ ಬ್ಯಾನರ್ಜಿ -Vishwanews24

ಮಾಣಿಲದ ಒಂದು ಸ್ಥಾನಕ್ಕೆ ಎಂಟು ನಾಮಪತ್ರಗಳು ಸಲ್ಲಿಕೆ ಆಗಿದ್ದು ಈ ಪೈಕಿ ಐದು ನಾಮಪತ್ರಗಳನ್ನು ಹಿಂಪಡೆಯಲಾಗಿತ್ತು. ಪಕ್ಷೇತರ ಅಭ್ಯರ್ಥಿ ಮೊಯ್ದೀನ್ ಕುಞ, ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ ಕೊಮ್ಮುಂಜೆ, ರಾಜೇಶ್ ಕುಮಾರ್ ಬಾಳೆಕಲ್ಲು ಬೆಂಬಲಿತ ಸೂರಜ್ ರೈ ಕೆಳಗಿನಮನೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

1025 ಮಂದಿ ಮತದಾರರಿರುವ ಮಾಣಿಲದಲ್ಲಿ 637 ಮತ ಚಲಾವಣೆಯಾಗಿದೆ. ಕಾಂಗ್ರೆಸ್‌ ಬೆಂಬಲಿತ ವಿಷ್ಣುಕುಮಾರ್ 364 ಮತ ಗಳಿಸಿ ಜಯ ಸಾಧಿಸಿದ್ದು, ರಾಜೇಶ್ ಕುಮಾರ್ ಬಾಳೆಕಲ್ಲು ಬೆಂಬಲಿತ ಸೂರಜ್ ರೈ ಕೆಳಗಿನಮನೆ 226 ಮತ ಗಳಿಸಿ ಪರಾಭವಗೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಮೊಯ್ದೀನ್ ಕುಞ 41 ಮತ ಗಳಿಸಿದ್ದು 6 ಮತಗಳು ತಿರಸ್ಕೃತಗೊಂಡಿವೆ.

ಇದನ್ನೂ ಓದಿ :ಇನ್ಮುಂದೆ ರೈಲಿನಲ್ಲಿ ಮೊಬೈಲ್‌ ಹಾಗೂ ಎಲೆಕ್ಟ್ರಾನಿಕ್‌‌ ಉಪಕರಣಗಳ ಚಾರ್ಜಿಂಗ್ ನಿರ್ಬಂಧ : ಭಾರತೀಯ ರೈಲ್ವೆ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

11 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

20 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

20 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

20 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

20 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago